ಬಂಟ್ವಾಳ: ಮುಂಬರುವ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ತುಂಬೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆಗೆ ಇನ್ನೇನು ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ನಮ್ಮ ಎಸ್‌ಡಿಪಿಐ ಕಾರ್ಯಕರ್ತರು ಕ್ಷೇತ್ರದಾದ್ಯಂತ ಚುರುಕಿನ ಪ್ರಚಾರ ಕಾರ್ಯ ನಡೆಸಿದ್ದಾರೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಎಂದು ತಿಳಿಸಿದರು.
ಇನ್ನೀಗ ತಳಮಟ್ಟದ ಪ್ರಚಾರದ ಸಮಯ. ಪ್ರತಿಯೊಬ್ಬ ಮತದಾರರ ಬಳಿ ಮತ ಯಾಚನೆ ಕಾರ್ಯ ತೀವ್ರಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲಾ ಕಾರ್ಯಕರ್ತರು ಹಾಗೂ ನಾಯಕರು ಪ್ರತಿ ನಿಮಿಷ ಸದುಪಯೋಗಪಡಿಸಿಕೊಂಡು ಮನೆಮನೆ ಬಾಗಿಲಿಗೆ ತೆರಳಿ ಪಕ್ಷದ ಪ್ರಚಾರ ಮಾಡಬೇಕಿದೆ ಎಂದು ತಿಳಿಸಿದ್ದಾರೆ.