ಮಂಗಳೂರು: ವಿಧಾನಸಭೆ ರಣಕಣ ರಂಗೇರಿದ್ದು, ಘಟಾನುಘಟಿ ನಾಯಕರು ಪ್ರಚಾರಕಾರ್ಯದಲ್ಲಿ ತೊಡಿಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 27 ರಂದು ಉಡುಪಿಯ ಉಚ್ಚಿಲದಲ್ಲಿ ನಡೆಯುವ ಬೃಹತ್ ಸಮಾವೇಶ ಭಾಗವಹಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಇದಲ್ಲದೇ ಮೀನುಗಾರ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ. 2018ರಲ್ಲಿಯೂ ನಡೆದ ಚುನಾವಣೆಯಲ್ಲೂ ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಗೆ ಭೇಟಿ ನೀಡಿದ್ದರು.