ಉಜಿರೆ: ಬಿಜೆಪಿಯವರು ಏನೆ ಕುತಂತ್ರ ನಡೆಸಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಉಜಿರೆಯಲ್ಲಿ ಕಾಂಗ್ರೆಸ್ ಸಮಾವೇಶ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ. ಆದರೆ ಬಿಜೆಪಿ ಒಡೆದ ಮನೆಯಾಗಿದೆ. ಜನರ ಸೇವೆಯೇ ನಮ್ಮ ಧ್ಯೇಯ. ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಆರ್‌ಎಸ್‌ಎಸ್‌ನವರು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಅವರು ಎಷ್ಟೇ ಪ್ರಯತ್ನ ನಡೆಸಿದರೂ ಯಶಸ್ಸು ಗಳಿಸುವುದಿಲ್ಲ ಎಂದರು.
ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಪಕ್ಷದವರೇ ಸರ್ಕಾರದ ಧೋರಣೆಗಳನ್ನು ವಿರೋಧಿಸುತ್ತಿದ್ದಾರೆ ಎಂದು ಉತ್ತರಿಸಿದ್ದರು.