News Kannada
Friday, March 01 2024
ಮಂಗಳೂರು

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

4th District Conference of Dakshina Kannada Working Journalists Association to be held on Nov 21
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷ ತೆ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಮ್ಮೇಳನ ಬೆಳಗ್ಗೆ 9 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಬೆಳಗ್ಗೆ 10ರಿಂದ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಮ್ಮೇಳನದಲ್ಲಿ ‘ಪತ್ರಿಕೋದ್ಯಮದ ಹೊಸ ಆಯಾಮ ಗಳು ‘ ಎಂಬ ವಿಷಯದಲ್ಲಿ ಸಮ್ಮೇಳನದ ಪ್ರಮುಖ ಗೋಷ್ಠಿ ನಡೆಯಲಿದೆ. ಈ ಗೋಷ್ಠಿ ಉದಯವಾಣಿ ದೈನಿಕದ ಸಂಪಾದಕ ಅರವಿಂದ ನಾವಡರ ಅಧ್ಯಕ್ಷ ತೆಯಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯಸ್ಥ ಹರ್ಷ ವಿಷಯ ಮಂಡನೆ ಮಾಡಲಿದ್ದಾರೆ.

ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಘಟಕಕಗಳ ಪತ್ರಕರ್ತ ಪ್ರತಿನಿಧಿಗಳ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ ನಡೆಯ ಲಿದೆ. ಶಾಸಕರಾದ ವೇದವ್ಯಾಸ ಕಾಮತ್ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಿದ್ದಾರೆ. ಡಾ.ವೈ ಭರತ್ ಶೆಟ್ಟಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸ ಲಿದ್ದಾರೆ. ಹರೀಶ್ ಪೂಂಜಾ ಹಸಿರು -ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಮ್ಮೇಳನದ ಕಾರ್ಯಕ್ರಮ ಗಳಿಗೆ ರಾಜೇಶ್ ನಾಯ್ಕ್ ಚಾಲನೆ ನೀಡಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ನೆರವೇರಿ ಸಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಸಮ್ಮೇಳನದ ಕಿಟ್ ಬಿಡುಗಡೆ ಗೊಳಿಸಲಿದ್ದಾರೆ.

ಸಮಾರಂಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ,ಡಾ. ಮಂಜುನಾಥ್‌ ಭಂಡಾರಿ, ಪ್ರತಾಪ್ ಸಿಂಹ ನಾಯಕ್, ಬಿ.ಎಂ. ಫಾರೂಕ್, ಬೊಜೇ ಗೌಡ.ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ,ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಇಫ್ತಿಕಾರ್ ಅಲಿ, ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಸುಧಾಕರ ಕೊಟ್ಟಾರಿ, ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕರುಮತ್ತು ವಲಯ ಮುಖಸ್ಥರಾದ ಗಾಯತ್ರಿ, ಶ್ರೀರಾಮ ಫೈನಾನ್ಸ್ ಝೊನಲ್ ಹೆಡ್ ಶರತ್‌ ಚಂದ್ರ ಭಟ್ ಕಾಕುಂಜೆ, ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್‌ ಸೊಸೈಟಿ ಅಧ್ಯಕ್ಷ ಸಿ.ಎ ಶಾಂತರಾಮ ಶೆಟ್ಟಿ,ಕ್ರೆಡಾಯಿ ಮಂಗಳೂರು ಅಧ್ಯಕ್ಷ ವಿನೋದ್ ಎ.ಆರ್.ಪಿಂಟೊ,ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು