News Kannada
Monday, February 26 2024
ಮಂಗಳೂರು

ಮಂಗಳೂರು : ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು- ಯು.ಟಿ.ಖಾದರ್

BJP government will last only 35 days: U T Khader
Photo Credit : News Kannada

ಮಂಗಳೂರು : ರಾಜ್ಯಾದ್ಯಂತ ಪಿಎಫ್ ಐ ಕಾರ್ಯಕರ್ತರ ಬಂಧನ ವಿಚಾರದ ಬಗ್ಗೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಪ್ರತಿಕ್ರಿಯಿಸಿ ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆ ವಿರುದ್ದ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ. ಕಾನೂನು ಕೈಗೆತ್ತಿಕೊಳ್ಳುವವರನ್ನ ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ಧಾರೆ.

ಮಂಗಳೂರಿನಲ್ಲಿ ಮಾತನಾಡಿದ ಯು.ಟಿ.ಖಾದರ್ ಅವರು ಶಾಂತಿ ಸೌಹಾರ್ದದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಬೇಕು. ಯಾವುದೇ ತಾರತಮ್ಯ ಮಾಡದೇ ಸರ್ಕಾರ ಕ್ರಮ ತೆಗೆದುಕೊಳ್ಳಲಿ, ಎಲ್ಲರಿಗೂ ಒಂದೇ ರೀತಿಯ ನ್ಯಾಯ ಕೊಟ್ಟರೆ ಎಲ್ಲರೂ ಬೆಂಬಲಿಸುತ್ತಾರೆ. ನಿರಪರಾಧಿಗಳಿಗೆ‌ ಅನ್ಯಾಯ ಆಗದಿದ್ರೆ ಸರ್ಕಾರವನ್ನ ಎಲ್ಲರೂ ಬೆಂಬಲಿಸ್ತಾರೆ.

ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ, ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ? ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ‌ ಬೆಂಬಲ ಕೊಡುತ್ತದೆ. ತಾರತಮ್ಯ ಮತ್ತು ಅನ್ಯಾಯ ಯಾರಿಗೂ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಅದು ಬಿಟ್ಟು ಈವರೆಗೆ ಯಾರೂ ಈ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವ ಸಂಸ್ಥೆ ಬ್ಯಾನ್ ಮಾಡಬೇಕು ಅನ್ನೋದು ತನಿಖೆಯಲ್ಲಿ ಗೊತ್ತಾಗುತ್ತೆ , ಆದರೆ ಎಲ್ಲಾ ‌ಸಂಘಟನೆಗೆ ಸಮಾನತೆಯ ಕಾನೂನು ತನ್ನಿ, ದ್ವೇಷಾಧರಿತ ಮತ್ತು ಗಲಭೆ ಸೃಷ್ಟಿಸುವ ಕೆಲಸ ಆಗಿದ್ದರೆ ಎಲ್ಲಾ ಸಂಘಟನೆಗಳಿಗೂ ಒಂದೇ ಕಾನೂನು ತನ್ನಿ ಎಂದು ಹೇಳಿದ್ಧಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು