News Karnataka Kannada
Friday, April 26 2024
ಮಂಗಳೂರು

ಬಂಟ್ವಾಳ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

No talavaru attack in Mani: Police
Photo Credit : News Kannada

ಬಂಟ್ವಾಳ: ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.

ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಣಿ ಜಂಕ್ಷನ್ ನಲ್ಲಿ ಆಕ್ಟೀವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ತಲವಾರಿನಿಂದ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಗಾಯಗೊಂಡ ಯುವಕರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು