News Kannada
Sunday, March 03 2024
ಮಂಗಳೂರು

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ

Bantwal: Body of missing man found in lake
Photo Credit : By Author

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪೊಯ್ಯಮೂಲೆ ಎಂಬಲ್ಲಿ ನಡೆದ‌ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪೊಯ್ಯಮೂಲೆ ನಿವಾಸಿ ಕೃಷ್ಣ ನಾಯ್ಕ್‌ (62 ವ.) ಮೃತಪಟ್ಟವರಾಗಿದ್ದಾರೆ.

ಕೃಷ್ಣ ನಾಯ್ಕ ರವರು ಸೆ.೧೭ರಂದು ಮದ್ಯಾಹ್ನ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪೊಯ್ಯಮೂಲೆಯಲ್ಲಿರುವ ತನ್ನ ಮನೆಯಿಂದ ಪೇಟೆಗೆಂದು ಹೇಳಿ ಹೋದವರು ಸಂಜೆಯಾದರೂ ಮನೆಗೆ ಹಿಂದಿರುಗಿ ಬಾರದ ಹಿನ್ನೆಲೆಯಲ್ಲಿ ಹತ್ತಿರದ ಮನೆಯ ಸಹಿತ ಸಂಬಂಧಿಕರ ಮನೆಯಲ್ಲಿ ಹುಡುಕಾಟ ನಡೆಸಿದರಾದರೂ ಅವರು ಪತ್ತೆಯಾಗಿರಲಿಲ್ಲ.‌ ಬಳಿಕ ತನ್ನ‌ ತಂದೆಯನ್ನು ಹುಡುಕಿ ಕೊಡುವಂತೆ ಕೃಷ್ಣ ನಾಯ್ಕ್ ರವರ ಪುತ್ರ ನವೀನಕುಮಾರ್ ವಿಟ್ಲ ಪೊಲೀಸ್ ಠಾಣೆಗೆ ದೂರು‌ ನೀಡಿದ್ದರು.

ಪೊಲೀಸರು ನಾಪತ್ತೆ ಪ್ರಕರಣ ದಾಖಲಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಕೃಷ್ಣ ನಾಯ್ಕ್ ರವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು