News Karnataka Kannada
Thursday, April 25 2024
ಮಂಗಳೂರು

ಬಂಟ್ವಾಳ: ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು – ರಮಾನಾಥ ರೈ

Like-minded people should fight elections together: Ramanath Rai
Photo Credit : By Author

ಬಂಟ್ವಾಳ: ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಎಡಪಂಥಿಯ ಚಿಂತನೆಗಳು ಹಾಗೂ ಕಾಂಗ್ರೆಸ್ ಸಿದ್ಧಾಂತಕ್ಕೂ ಸಾಕಷ್ಟು ಸಾಮ್ಯತೆಯಿದೆ. ಕಾಂಗ್ರೆಸ್ ಹಾಗೂ ಎಡಪಂಥಿಯ ಪಕ್ಷಗಳು ಜೊತೆಗೂಡಿ ಸರಕಾರ ನಡೆಸಿದ ಇತಿಹಾಸವೂ ಇದೆಎಂದು ಅವರು ಈ ಸಂದರ್ಭ ಹೇಳಿದರು.

ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಮಾತನಾಡಿ, ರಮಾನಾಥ ರೈ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಅವರನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲೂ ಇದೆ. ಹೀಗಾಗಿ, ಈ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಸಿಪಿಐ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ ಎಂದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಎವೈಐಎಫ್ ಅಧ್ಯಕ್ಷ ಪ್ರೇಮನಾಥ ಕೆ., ಮಹಿಳಾ ಒಕ್ಕೂಟದ ಅಧ್ಯಕ್ಷೆ ಭಾರತಿ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು