News Karnataka Kannada
Friday, March 29 2024
Cricket
ಮಂಗಳೂರು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ

Basanagouda Patil Yatnal visits Sri Mahalingeshwara Temple
Photo Credit : News Kannada

ಪುತ್ತೂರು: ವಿಜಯಪುರದ ಬಿಜೆಪಿ ಶಾಸಕ, ಫೈರ್‌ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ ಯತ್ನಾಳ್‌ ಪಂಚವಟಿಗೆ ತೆರಳಿ ಅಲ್ಲಿಂದ ಬಿಜೆಪಿ ಕಚೇರಿಗೆ ತೆರಳಿದರು. ಬ್ಯಾನರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾಗಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲೆಂದು ಪುತ್ತೂರಿಗೆ ಆಗಮಿಸಿದ ಯತ್ನಾಳ್‌ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದ ಸತ್ಯಧರ್ಮ ನಡೆಯಲ್ಲಿ‌ ನಿಂತು‌ ಪ್ರಾರ್ಥನೆ ಮಾಡಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್ ಶಲ್ಯ ಹಾಕಿ ಗೌರವಿಸಿದರು.

ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಮದಾಸ್ ಗೌಡ, ಶೇಖರ್ ನಾರಾವಿ ಸಹಿತ ಹಲವಾರು ಮಂದಿ ಪಕ್ಷದ ನಾಯಕರು ಸಹಿತ ಅನೇಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು