News Kannada
Sunday, February 25 2024
ಮಂಗಳೂರು

ಬೆಳ್ತಂಗಡಿ: ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಬಿಜೆಪಿ ಕಾರ್ಯಕರ್ತರು

Belthangady: Kuvettu BJP workers block potholes and allow vehicular traffic to ply
Photo Credit : By Author

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಗುಂಡಿಗಳು ಬಿದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಕುವೆಟ್ಟು ಬಿಜೆಪಿ ಕಾರ್ಯಕರ್ತರು ಗುರುವಾಯನಕೆರೆಯಿಂದ ಜೈನ್ ಪೇಟೆ ತನಕ ರಸ್ತೆಯಲ್ಲಿ ಇರುವ ಗುಂಡಿಗಳನ್ನು ಶ್ರಮದಾನದ ಮೂಲಕ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಶ್ರಮದಾನದಲ್ಲಿ ಭಾರತೀಯ ಜನತಾಪಾರ್ಟಿಯ ಕುವೆಟ್ಟು ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ಮಳೆಯಿಂದಾಗಿ ದುರಸ್ತಿಗೊಳಿಸಲು ತೊಂದರೆಯಾಗುತ್ತಿದೆ. ಮಳೆ ಸ್ವಲ್ಪ ಕಡಿಮೆಯಾದ ಕೂಡಲೇ ದುರಸ್ತಿ ಕೆಲಸ ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಈಗಾಗಲೇ ಗುರುವಾಯನಕೆರೆಯಿಂದ ಉಜಿರೆಯವರೆಗೆ ಚತುಷ್ಪಥ ಇನ್ನುಳಿದಂತೆ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ದ್ವಿಪಥ ರಸ್ತೆ ನಿರ್ಮಾಣವಾಗಲಿದೆ. ಇದಕ್ಕಾಗಿ 718 ಕೋ. ರೂ ಅನುದಾನ ಬಿಡುಗಡೆಗೊಂಡಿದ್ದು ಇದರ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು ನವಂಬರ್ ತಿಂಗಳಲ್ಲಿ‌ ಕಾಮಗಾರಿ ಪ್ರಾರಂಭವಾಗಲಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು