News Karnataka Kannada
Tuesday, April 16 2024
Cricket
ಮಂಗಳೂರು

ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರ ಯಶಸ್ವಿಯಾಗುವುದಿಲ್ಲ : ರಮಾನಾಥ ರೈ

BJP's strategy of winning on left route will not succeed: Ramanath Rai
Photo Credit : News Kannada

ಬಂಟ್ವಾಳ : ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರಕ್ಕೆ ಈ ಬಾರಿ ಯಶಸ್ಸು ಸಿಗಲಾರದು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಪುಂಜಾಲಕಟ್ಟೆ ಮತ್ತು ಪಿಲಾತಬೆಟ್ಟುವಿನಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನುದ್ದೇಶಿಸಿ ಮಾತನಾಡಿದರು.

ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಅಭಿವೃದ್ಧಿ ಶೂನ್ಯವಾಗಿದೆ. ಜನರ ಮುಂದೆ ಮಾತನಾಡುವುದಕ್ಕೆ ಅವರ ಬಳಿ ವಿಷಯಗಳಿಲ್ಲ. ಹೀಗಾಗಿ ಈ ಬಾರಿ ಕೂಡ ಅವರು ಸುಳ್ಳು, ವದಂತಿಗಳ ಮೂಲಕವೇ ಚುನಾವಣೆ ಗೆಲ್ಲುವ ತಂತ್ರ ಹೂಡಿದ್ದಾರೆ. ಆದರೆ, ಜನರು ಬಿಜೆಪಿಯ ಇಂತಹ ಕುತಂತ್ರಗಳನ್ನು ಮೆಟ್ಟಿನಿಂತು ಕಾಂಗ್ರೆಸ್ ಅನ್ನು ಭಾರೀ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ರೈ ಭರವಸೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳ ನೇತೃತ್ವ ನಾನು ವಹಿಸಿದ್ದೇನೆ. ಅನೇಕ ದೇವಸ್ಥಾನಗಳಿಗೆ ಧ್ವಜಸ್ಥಂಭ ನೀಡಿ ಸೇವೆ ಸಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ರೈ ತಿಳಿಸಿದರು.

ನ್ಯಾಯವಾದಿ, ಕೆಪಿಸಿಸಿ ಮುಖಂಡ ಅಶ್ವನಿ ಕುಮಾರ್ ರೈ ಮಾತನಾಡಿ, ರಮಾನಾಥ ರೈಗಳ ಅವಧಿಯಲ್ಲಿ ಬಡವರು, ಅಶಕ್ತರಿಗೆ ಸಾಕಷ್ಟು ಸೌಲಭ್ಯಗಳು ಸುಲಭವಾಗಿ ತಲುಪಿವೆ. ಸುಮಾರು 20,000ಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರಗಳು ಸಿಕ್ಕಿವೆ. ಅಕ್ರಮ ಸಕ್ರಮ ಭೂಮಿ ಹಂಚಿಕೆಯು ಮಾಯಿಲಪ್ಪ ಸಾಲ್ಯಾನರ ಅಧ್ಯಕ್ಷತೆಯಲ್ಲಿ ನಿಷ್ಪಕ್ಷಪಾತವಾಗಿ, ಭ್ರಷ್ಟಾಚಾರ ರಹಿತವಾಗಿ ಹಂಚಲ್ಪಟ್ಟಿತ್ತು. ಆದರೆ, ಈಗ ಭೂಮಿ ಹಂಚಿಕೆಯ ವಿಷಯದಲ್ಲಿ ಯಾವ ರೀತಿಯ ಭ್ರಷ್ಟಾಚಾರ ನಡೆದಿದೆ ಎಂಬುದು ಬಂಟ್ವಾಳದ ಜನತೆಗೆ ತಿಳಿದಿದೆ ಎಂದರು.

ಸಜ್ಜನಿಕೆಯ ರಾಜಕಾರಣಕ್ಕೆ ರಮಾನಾಥ ರೈಗಳು ಇಡೀ ರಾಜ್ಯಕ್ಕೆ ಹೆಸರಾದವರು. ಅವರ ಮನೆಗೆ ಯಾರೇ ಬಂದರೂ ವಿನಯ, ವಿದೇಯತೆಯಿಂದ ಕೆಲಸ ಮಾಡಿಕೊಡುತ್ತಾರೆ. ಅಧಿಕಾರ ಇಲ್ಲದಿದ್ದರೂ, ಅವರ ಮನೆಯಲ್ಲಿ ದಿನನಿತ್ಯ ನೂರಾರು ಮಂದಿ ಆಗಮಿಸಿ, ತಮಗೆ ಬೇಕಾದ ಕೆಲಸಗಳನ್ನು ಮಾಡಿಸಿಕೊಂಡು ಹೋಗುತ್ತಿರುತ್ತಾರೆ. ಇಂತಹ ಜನನಾಯಕನನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ, ಅವರಿಂದ ಕ್ಷೇತ್ರ ಹಾಗೂ ರಾಜ್ಯದ ಜನತೆಗೆ ಸೇವೆಯನ್ನು ಪಡೆಯುವ ಸೌಭಾಗ್ಯವನ್ನು ಮತದಾರ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಕವಿತಾ ಸನಿಲ್, ಕೆಪಿಸಿಸಿ ಮುಖಂಡ ರಾಜಶೇಖರ್ ಕೋಟ್ಯಾನ್, ಕೆಪಿಸಿಸಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್. ರೊಡ್ರಿಗಸ್, ಪ್ರಮುಖರಾದ ಪದ್ಮಶೇಖರ್ ಜೈನ್, ಜನಾರ್ಧನ್ ಚೆಂಡ್ತಿಮಾರ್, ಅಬ್ಬಾಸ್ ಅಲಿ, ಮೋಹನ್ ಸಾಲ್ಯಾನ್, ಬಾಲಾಜಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು