News Karnataka Kannada
Thursday, April 18 2024
Cricket
ಮಂಗಳೂರು

ಶಾಲಾಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯ- ಹರೀಶ್ ಪೂಂಜ

Community's cooperation is essential for school development: Harish Poonja
Photo Credit : News Kannada

ಬೆಳ್ತಂಗಡಿ: ಶಾಲಾಭಿವೃದ್ಧಿಗೆ ಈಗಾಗಲೇ ಎರಡು ಕೋಟಿ ರೂ. ಅನುದಾನ ಒದಗಿಸಿದ್ದು, ನಿರಂತರ ಅಭಿವೃದ್ಧಿ ಕಾರ್ಯಗಳೊಂದಿಗೆ ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೇಳಿದರು.

ಅವರು ಬುಧವಾರ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಪುಂಜಾಲಕಟ್ಟೆ ಶಾಲೆಯನ್ನು ಆಯ್ಕೆ ಮಾಡಿದುದರಿಂದ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಶಿಕ್ಷಣ ದೊರಕುವಂತಾಗಿದೆ ಎಂದರು.

ಮಕ್ಕಳು ಉತ್ತಮ ಶಿಕ್ಷಣ ಪಡೆದು ಮನೆಯನ್ನು, ಶಾಲೆಯನ್ನು, ಸಮಾಜವನ್ನು ಬೆಳಗುವಂತಾಗಲು ಅವರಿಗೆ ಉತ್ತಮ ಸಂಸ್ಕಾರ ನೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪೋಷಕರ ಕರ್ತವ್ಯವಾಗಿದೆ. ಶಾಲಾಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯ ಎಂದರು.

ಬೆಳ್ತಂಗಡಿ ಶಿಕ್ಷಣಾಕಾರಿ ವೀರೂಪಾಕ್ಷ ಅವರು ಮಾತನಾಡಿ, ಇಲಾಖೆಯಿಂದ ದೊರೆಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶಶಿಪ್ರಭಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪುಂಜಾಲಕಟ್ಟೆ ಪಬ್ಲಿಕ್ ಸ್ಕೂಲ್ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪೋಷಕರು ಸದುಪಯೋಗ ಪಡಕೊಳ್ಳಬೇಕು ಎಂದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಪ.ಪೂ ಕಾಲೇಜು ಪ್ರಾಂಶುಪಾಲೆ ಡಾ. ಸರೋಜಿನಿ ಆಚಾರ್ಯ, ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅರ್ಚಕ ಶ್ರೀಧರ ರಾವ್ ಪೇಜಾವರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಂ ಪ್ರಸಾದ್ ಸಂಪಿಗೆತ್ತಾಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ, ಪೂರ್ವ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ ಕಂಗಿತ್ತಿಲು, ಮಡಂತ್ಯಾರು ಗ್ರಾ.ಪಂ.ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸರಕಾರದಿಂದ ಕೊಡಮಾಡಿದ ಪಠ್ಯ ಪುಸ್ತಕ, ಸಮವಸ್ತ್ರಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳನ್ನು ಹೂ ನೀಡಿ, ಆರತಿ ಬೆಳಗಿ ಸ್ವಾಗತಿಸಲಾಯಿತು.ಬ್ಯಾಂಡ್, ಮೆರವಣಿಗೆ ಮೂಲಕ ಮಕ್ಕಳನ್ನು ಕರೆ ತರಲಾಯಿತು.

ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉದಯ ಕುಮಾರ್ ಜೈನ್ ಅವರು ಸ್ವಾಗತಿಸಿದರು. ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಶೆಟ್ಟಿ ವಂದಿಸಿದರು. ಪ್ರೌಢಶಾಲಾ ಶಿಕ್ಷಕ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು