News Kannada
Saturday, February 24 2024
ಮಂಗಳೂರು

ದಕ್ಷಿಣ ಕನ್ನಡ: ಕಂಬಳ ಕ್ಷೇತ್ರದಲ್ಲಿ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲು

Photo Credit : News Kannada

ದಕ್ಷಿಣ ಕನ್ನಡ: ಕಂಬಳ ಕ್ಷೇತ್ರದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕೇಸು ದಾಖಲಾಗಿದೆ. ಅದೂ ಕೂಡ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ಬುಕ್ ಆಗಿದೆ.

ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿಯ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ಧವೂ ಕ್ರಿಮಿನಲ್ ದೂರು ನೀಡಲಾಗಿದೆ.

ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸೈವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ನೀಡಲಾಗಿದೆ ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಹೇಳಲಾಗಿದೆ.

2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್ ನಲ್ಲಿ ಶ್ರೀನಿವಾಸ ಗೌಡ ಕ್ರಮಿಸಿದ್ದರು.

2009ರಲ್ಲಿ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್‌ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು. ರಾಜ್ಯ ಸರ್ಕಾರ ಸೇರಿ ದೇಶದ ಹಲವು ಸಂಸ್ಥೆಗಳು ಶ್ರೀನಿವಾಸ ಗೌಡಗೆ ನೆರವು ನೀಡಿದ್ದವು.

 

ಕಂಬಳದ ಉಸೇನ್ ಬೋಲ್ಟ್ ವಿರುಧ್ಧ ಪೊಲೀಸ್ ಠಾಣೆಗೆ ದೂರು ವಿಚಾರ, ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬವರು ಮೂಡಬಿದ್ರೆ ಠಾಣೆಗೆ ದೂರು ನೀಡಿದ್ದಾರೆ. ಕಂಬಳ ಸಮಿತಿ ಹೆಸರಿನಲ್ಲಿ ಮೂವರು ವಂಚನೆ ಎಸಗಿದ್ದಾಗಿ ದೂರಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರ ‌ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ. ಸಮಿತಿ ಹೆಸರಲ್ಲಿ ಹಣ ಪಡೆದು ಲಕ್ಷಾಂತರ ರೂ. ಹಣಕ್ಕೆ ಲೆಕ್ಕಪತ್ರ ಕೊಟ್ಟಿಲ್ಲ ಅಂತ ದೂರಿದ್ದಾರೆ. ಸದ್ಯ ಮೂವರ ವಿರುದ್ದ ಈ ದೂರನ್ನು ಕೊಡಲಾಗಿದೆ. ದೂರಿಗೆ ಸಂಬಂಧಿಸಿದಂತೆ ವಿಚಾರಣೆ ‌ನಡೆಸಲು ಸೂಚಿಸಿದ್ದೇನೆ. ಮೂಡಬಿದ್ರೆ ಇನ್ಸ್ಪೆಕ್ಟರ್ ಈ ಬಗ್ಗೆ ವಿಚಾರಣೆ ನಡೆಸಿ ಸತ್ಯಾಸತ್ಯತೆ ‌ತನಿಖೆ ಮಾಡ್ತಾರೆ – ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು