News Kannada
Wednesday, February 28 2024
ಮಂಗಳೂರು

ಬಂಟ್ವಾಳ: ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತ ಆತ್ಮಹತ್ಯೆ

Mother dead wherever she was, come home early: Son in tears with mother's body for sister
Photo Credit :

ಬಂಟ್ವಾಳ: ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡಿದು ಎಂಬಲ್ಲಿ ನಡೆದಿದೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಜೀವ ಪೂಜಾರಿ (75) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಅವರ ಪುತ್ರ ನವೀನ್ ಎಂಬಾತ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂಜೀವ ಪೂಜಾರಿ ಸಹಕಾರಿ ಸಂಘದಿಂದ ಸಾಲವನ್ನು ತೆಗೆದುಕೊಂಡಿದ್ದು, ಸಾಲವನ್ನು ಮರುಪಾವತಿಸುವಂತೆ ನೋಟೀಸ್ ಕಳುಹಿಸಿರುತ್ತಾರೆ.

ಕೃಷಿ ಸಾಲವನ್ನು ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲ ಬಾದೆಯಿಂದ ಬೇಸರಗೊಂಡು ಮಾನಸಿಕವಾಗಿ ನೊಂದು ಸಾಯುವ ಉದ್ದೇಶದಿಂದ ಜುಲೈ 14ರಂದು ಸಂಜೆ ಸುಮಾರು 5 ಗಂಟೆಗೆ ಬಂಟ್ವಾಳ ತಾಲೂಕು ಮೈಕೆ ಎಂಬಲ್ಲಿಯ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಭಾವ ಶೇಖರ ಪೂಜಾರಿ ಹಾಗೂ ಇತರರು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಂಜೆ 7 ಗಂಟೆಗೆ ಹೋಗಿದ್ದು ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು