News Karnataka Kannada
Friday, April 26 2024
ಮಂಗಳೂರು

ಆಟೋರಿಕ್ಷಾ – ಬೈಕ್ ನಡುವೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ನಾಗರಬಾವಿ ಹೊರ ವರ್ತುಲ ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಲ್ಲಿ ಹೋಗುವಾಗ ಆಯ ತಪ್ಪಿ ರಸ್ತೆಗೆ ಬಿದ್ದಾಗ ಖಾಸಗಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit : IANS

ಬಂಟ್ವಾಳ: ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.

ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಬೆಳ್ತಂಗಡಿ ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹಸವಾರ ರಶ್ಮಿತ್ ಹೀಗೆ ನಾಲ್ವರು ಗಾಯಗೊಂಡವರು.

ಇಂದು ಮೇ. 30 ರಂದು ಮಧ್ಯಾಹ್ನದ ಸಮಯದಲ್ಲಿ ಬಂಟ್ವಾಳದ ಭಂಡಾರಿಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಭಂಡಾರಿಬೆಟ್ಟು ಎಂಬಲ್ಲಿ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ. ಹಾಗೂ ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು