News Kannada
Saturday, September 30 2023
ಮಂಗಳೂರು

ನಾವೂ ಧ್ವನಿ ಎತ್ತಿದ ಸಲುವಾಗಿ ಸರಕಾರ ನಮ್ಮ ಧಾರ್ಮಿಕ ಭಾವನೆಗೆ ಸ್ಪಂದಿಸಿದೆ: ಶಾಸಕ ವೇದವ್ಯಾಸ್ ಕಾಮತ್

Govt has responded to our religious sentiments: MLA Vedavyas Kamath
Photo Credit : News Kannada

ಮಂಗಳೂರು: ಇಂದು ಎಲ್ಲೆಡೆ ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಹೊರತು ಪಡಿಸಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಕರಾವಳಿ ಜಿಲ್ಲೆಯಲ್ಲಿ ನಾಳೆ ಚೌತಿ ಹಬ್ಬ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಿರುವ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾಳೆ ರಜೆ ನೀಡುವಂತೆ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪತ್ರ ಬರೆದಿದ್ದರು. ಸರಕಾರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಪತ್ರದ ಮುಖೇನ ಮನವಿ ಮಾಡಿದ್ದರು.

ಅದರಂತೆ ಕರಾವಳಿ ಜನರ ಮನವಿಗೆ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಸೆ.18ರ ಬದಲು ನಾಳೆ (ಸೆ 19ಕ್ಕೆ ) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ನಾಳೆ ಕರಾವಳಿ ಜಿಲ್ಲೆಗಳಲ್ಲಿ ಸಂಭ್ರಮ ಸಡಗರದ ಚೌತಿ ಹಬ್ಬ ಮನೆ ಮಾಡಲಿದೆ. ಸಾರ್ವತ್ರಿಕ ರಜೆ ಘೋಷಿಸಿ ಸರಕಾರ ಆದೇಶಿಸಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್, ನಾವೂ ಧ್ವನಿ ಎತ್ತಿದ ಸಲುವಾಗಿ ಸರಕಾರ ನಮ್ಮ ಧಾರ್ಮಿಕ ಭಾವನೆಗೆ ಸ್ಪಂದಿಸಿದೆ. ಸರಕಾರದ ಸ್ಪಂದನೆಯನ್ನ ಸ್ವಾಗತಿಸಿದೆ ಎಂದು ಹೇಳಿದ್ದಾರೆ.

See also  ಜೂನ್ 5ರಂದು ಕರಾವಳಿಗೆ ಮುಂಗಾರು ಪ್ರವೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು