News Karnataka Kannada
Saturday, April 20 2024
Cricket
ಮಂಗಳೂರು

ಅರುಣಣ್ಣ ಬರದಿದ್ದಲ್ಲಿ ಲಾಕಪ್‌ ಡೆತ್‌ ಆಗುತ್ತಿತ್ತು: ಹಿಂದು ಕಾರ್ಯಕರ್ತರ ಆರೋಪ

Had Arunanna not come, there would have been a lock-up death: Hindu activists
Photo Credit : News Kannada

ಮಂಗಳೂರು: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದ್ದು ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ, ಸಂಪ್ಯ ಎಸ್ಐ, ಸಿಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆ ಕುರಿತಂತೆ ಹೇಳಿಕೆ ನೀಡಿರುವ ಹಿಂದು ಕಾರ್ಯಕರ್ತರು, ಹೊಟ್ಟೆ, ತೊಡೆ, ತಲೆ, ಮೊಣಕಾಲಿಗೆ ಹೊಡೆದಿದ್ದಾಗಿ ಹೇಳಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಹಲ್ಲೆಗೊಳಗಾದ ಕಾರ್ಯಕರ್ತರು ರಾತ್ರಿ ವೇಳೆ ಅರುಣ್ ಪುತ್ತಿಲ ಠಾಣೆಗೆ ಬರದೇ ಇರುತ್ತಿದ್ದರೆ ಲಾಕಪ್ ಡೆತ್ ಆಗುತ್ತಿತ್ತು ಎಂದು ವಿವರಿಸಿದ್ದಾರೆ.

ಡಿವೈಎಸ್ಪಿ ಅಧಿಕಾರಿ ಇತರ ಪೊಲೀಸರ ಜೊತೆಗೂಡಿ ಹಲ್ಲೆ ನಡೆಸಿದ್ದಾರೆ ಎಂದು ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಅರುಣ್‌ ಪುತ್ತಿಲ ಎಫ್ಐಆರ್ ದಾಖಲಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡ್ತೀವಿ ಎಂದು ಹೇಳಿಕೆ ನೀಡಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಎಸ್ಪಿ ವಿಕ್ರಮ್ ಅಮಟೆ ಪುತ್ತೂರು ನಗರ ಠಾಣೆಯಲ್ಲಿ ಉಳಿದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು