News Karnataka Kannada
Thursday, April 25 2024
ಮಂಗಳೂರು

ಬೆಳ್ತಂಗಡಿಯ ಅಭಿವೃದ್ಧಿ ಕಂಡು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

He quits Congress to join BJP after seeing development of Belthangady
Photo Credit : News Kannada

ಬೆಳ್ತಂಗಡಿ: ಕಳೆದ ಬಾರಿ ಬೆಳ್ತಂಗಡಿ ತಾಲೂಕಿನ ಮತದಾರರು ನೀಡಿದ ಒಂದೊಂದು ಮತವೂ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿಯನ್ನು ಬರೆದಿದ್ದು, ಈ ಬಾರಿಯೂ ಮತ್ತೆ ಅವಕಾಶವನ್ನು ನೀಡಿದಲ್ಲಿ ಮತ್ತಷ್ಟು ಅನುದಾನವನ್ನು ತಂದು ದೇಶದಲ್ಲೇ ಬೆಳ್ತಂಗಡಿಯನ್ನು ಗುರುತಿಸುವಂತೆ ಮಾಡುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಬಿಜೆಪಿ ಅಭ್ಯ ರ್ಥಿ ಹರೀಶ್ ಪೂಂಜ ಹೇಳಿದರು.

ಅವರು ಕೊಕ್ಕಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ತಾಲೂಕಿನಾದ್ಯಂತ ಗ್ರಾಮೀಣ ಭಾಗದ ರಸ್ತೆಗಳನ್ನು ಕಾಂಕ್ರಿಟೀಕರಣಗೊಳಿಸಿ ಕಂಗೊಳಿಸುವಂತೆ ಮಾಡಲಾಗಿದೆ. ಕೃಷಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಕಿಂಡಿ ಅಣೆಕಟ್ಟು ಸಹಿತ ಸೇತುವೆಗಳನ್ನು ನಿರ್ಮಿಸಿ ಅಂತರ್ಜಲ ವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಈ ಬಾರಿಯೂ ನಿಮ್ಮ ಆಶೀರ್ವಾದ ಮುಖ್ಯ ಎಂದರು.

ಈ ಸಂದರ್ಭ ಕೊಕ್ಕಡದ ಕಾಂಗ್ರೆಸ್ ಮುಖಂಡರಾದ ಶಾಜನ್ ಟಿ.ಟಿ. ಕಾಂಜಾಲ್, ಮತ್ತು ಲಕ್ಷ್ಮಣ್ ಜಿ.ಎಸ್. ಅವರು ಬಿಜೆಪಿ ಸೇರ್ಪಡೆಗೊಂಡರು. ಕೊಕ್ಕಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕಳೆಂಜ ಗ್ರಾಮದ ಕೃಷ್ಣ ಕುಮಾರ್ ಕಾಯರ್ತಡ್ಕ, ಗುರುನಾಥ್ ಕಾರ್ಯತಡ್ಕ, ಪಟ್ರಮೆ ಗ್ರಾಮದ ಲೀಯೋ ಪಟ್ಟೂರು ಅವರು ಬಿಜೆಪಿಗೆ ಸೇರ್ಪಡೆಗೊಂಡರು.

ಈ ವೇಳೆ ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರು ಪಕ್ಷದ ಧ್ಜಜ ನೀಡುವ ಮೂಲಕ ಕಾಂಗ್ರೆಸ್ ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಂಡರು.

ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಭಾರಿ ಯತೀಶ್ ಆರ್ವಾರ್, ನ್ಯಾಯವಾದಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಮಂಡಲ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್, ಗಣೇಶ್ ನಾವೂರು, ಧರ್ಮಸ್ಥಳ ಮಹಾಶಕ್ತಿಕೇಂದ್ರ ಅಧ್ಯಕ್ಷ ಯೋಗೀಶ್ ಆಲಂಬಿಲ, ಮುಖಂಡರಾದ ಚಂದನ್ ಕಾಮತ್, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳ್ತಂಗಡಿಯ ಅಭಿವೃದ್ಧಿ ಕಂಡು ಬಿಜೆಪಿಗೆ ಸೇರ್ಪಡೆ
ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಹಲವಾರು ಅಭಿವೃದ್ಧಿ ಕಾರ್ಯಗಳಾದ ರಸ್ತೆ, ನೀರು, ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ, ತಾಲೂಕಿನ ವಿವಿದೆಡೆ ಸಮುದಾಯ ಭವನ, ರಿಕ್ಷಾ ತಂಗುದಾಣ ಸೇರಿದಂತೆ ವಿವಿ್ ಮೂಲಭೂತ ಸೌಕರ್‍ಯಗಳಿಗೆ ಒತ್ತು ನೀಡಿದ ಶಾಸಕ ಹರೀಶ್ ಪೂಂಜ ಅವರ ಮೇಲಿನ ಅಭಿಮಾನ, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳ ನೂರಾರು ಮಂದಿ ಕಾಂಗ್ರೆಸ್ ಮುಖಂಡರು, ಪಂಚಾಯತ್ ಸದಸ್ಯರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡು ಹರೀಶ್ ಪೂಂಜ ಅವರ ಗೆಲುವಿಗಾಗಿ ಶ್ರಮಿಸಲು ಪಣತೊಟ್ಟಿದ್ದಾರೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯ ಬಿಡುಗಡೆ                                                                                    ಬೆಳ್ತಂಗಡಿಯ ಹಳೇಕೋಟೆ ಬಿಜೆಪಿ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಮತ್ತು ಮಂಡಲ ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ತಾಲೂಕು ಪ್ರಮುಖ್ ಜಯಾನಂದ ಗೌಡ,ಮಹಾಬಲ ಗೌಡ,ಮುಗುಳಿ ನಾರಾಯಣ ರಾವ್,ರಾಜೇಶ್ ಪ್ರಭು,ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್,ಲೋಕೇಶ್,ನಿರ್ದೇಶಕ ಸದಸ್ಯರಾದ ಪ್ರಕಾಶ್ ,ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆರ್ಮುಡ ಉಪಸ್ಥಿತರಿದ್ದರು.

ಬಿಜೆಪಿ ಪ್ರಣಾಳಿಕೆಯ ಅಂಶಗಳು : ಬಿಜೆಪಿ ಪ್ರಣಾಳಿಕೆಯಲ್ಲಿ ನಗರದ ರಸ್ತೆಗಳ ಸೌಂದರೀಕರಣ,ಸುಸಜ್ಜಿತ ಸಂತೆ ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿ,ಸುಸಜ್ಜಿತ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ಗೂಡ್ಸ್ ಟೆಂಪೋ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ನಿವೇಶನರಹಿತರಿಗೆ ನಿವೇಶನ ಒದಗಿಸುವುದು,ನಗರದ ಎಲ್ಲ ವಸತಿರಹಿತರಿಗೆ ವಸತಿ ಒದಗಿಸುವುದು,ನಗರದ ಪ್ರತಿ ಮನೆಗಳಿಗೆ 12 ಗಂಟೆ ಕುಡಿಯುವ ನೀರಿನ ವ್ಯವಸ್ಥೆ, ನಗರದ ಪ್ರಮುಖ ಕೆರೆಗಳ ಅಭಿವೃದ್ಧಿ, ನಗರದ ಆಯ್ದ ಭಾಗದಲ್ಲಿ ಚಿಣ್ಣರ ಪಾರ್ಕ್ ನಿರ್ಮಾಣ,ಸಾಲು ಮರದ ತಿಮ್ಮಕ್ಕ ಟೀ ಪಾರ್ಕನ್ನು 2ನೇ ಹಂತದ ಕಾರ್ಯ ಯೋಜನೆಯಾಗಿ ಅಭಿವೃದ್ಧಿಗೊಳಿಸುವುದು, ಸರಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದು, ನಗರದ ಹೈ ಟೆಕ್ ಸ್ಮಶಾನ ನಿರ್ಮಾಣ, ನಗರದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ ಮಾಡುವುದು ಮೊದಲಾದ ಅಭಿವೃದ್ಧಿ ಯೋಜನೆಗಳನ್ನು ಅಳವಡಿಸಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು