News Karnataka Kannada
Thursday, April 25 2024
ಮಂಗಳೂರು

ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದೆ, ಕೆವೈಸಿ ಅಪ್‌ಡೇಟ್‌ ಮಾಡಬೇಕೆಂದು ಹೇಳಿ 3 ಲಕ್ಷ ರೂ. ವಂಚನೆ

Another senior citizen in Mangaluru becomes victim of fake email, loses ₹1.15 lakh
Photo Credit : Freepik

ಮಂಗಳೂರು: ನಿಮ್ಮ ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದೆ ಕೆವೈಸಿ ಅಪ್‌ಡೇಟ್‌ ಮಾಡಬೇಕು ಎಂದು ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 3.10 ಲಕ್ಷ ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರ ಮೊಬೈಲ್‌ಗೆ ಮೇ 24ರಂದು ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದ್ದು, ಕೆವೈಸಿ ಅಪ್‌ ಡೇಟ್‌ ಮಾಡಬೇಕೆಂದು ಎಂದು ಸಂದೇಶ ಬಂದಿತ್ತು. ಬಳಿಕ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೆವೈಸಿ ಅಪ್‌ಡೇಟ್‌ ಮಾಡುವ ಅಧಿಕಾರಿ ಎಂದು ಪರಿಚಯ ಮಾಡಿದ ಆತ ಕಸ್ಟಮರ್‌ ಐಡಿ ಕೇಳಿದ್ದಾನೆ.

ಬಳಿಕ ಕ್ರೆಡಿಟ್‌ ಕಾರ್ಡ್‌ ಮತ್ತು ಡೆಬಿಟ್‌ ಕಾರ್ಡ್‌ ನಂಬರ್‌ ಕೇಳಿದ್ದು, ಅನಂತರ ಮೊಬೈಲ್‌ಗೆ ಬಂದ ಒಟಿಪಿಯನ್ನು ಪಡೆದುಕೊಂಡಿದ್ದಾನೆ. ಒಟಿಪಿ ನೀಡಿದ ಕೂಡಲೇ ಖಾತೆಯಿಂದ ಹಂತ ಹಂತವಾಗಿ ಒಟ್ಟು 3,10,000 ರೂ. ವರ್ಗಾವಣೆಯಾಗಿದೆ. ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಒಟಿಪಿ ಪಡೆದು ಖಾತೆಯಿಂದ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು