News Kannada
Friday, March 01 2024
ಮಂಗಳೂರು

ದ.ಕ, ಉಡುಪಿಯಲ್ಲಿ 10 ದಿನ ಭಾರೀ ಮಳೆ ಸಾಧ್ಯತೆ

Heavy rain warning issued for 10 districts
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ನೆಚ್ಚರಿಕೆ ನೀಡಿದೆ.

ಮಂಗಳೂರು ನಗರದಲ್ಲಿ ಬುಧವಾರ ಬೆಳಗ್ಗೆ ಮಳೆಯಾಗಿದ್ದು, ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕಾಪು, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಜುಲೈ 2ರಿಂದ ಮಳೆ ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ 40ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಮರವಂತೆಯಲ್ಲಿ ಭೀಕರ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಆದರೆ ಪ್ರವಾಸಿಗರು ಮಾತ್ರ ಹುಚ್ಚು ದೈರ್ಯದಿಂದ ಸಮುದ್ರದಲ್ಲಿ ಹುಚ್ಚಾಟ ಮೆರೆಯುತ್ತಿದ್ದಾರೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಅಲ್ಲಲ್ಲಿ ಫಲಕಗಳನ್ನು ಅಳವಡಿಸಲಾಗಿದೆ. ಆಪಾಯದ ಮುನ್ಸೂಚನೆಯಾಗಿ ಅಪಾಯದ ಟೇಪ್‍ಗಳನ್ನು ಕಟ್ಟಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು