ಕಡಬ: ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ನಡೆದಿದೆ.
ರೆಂಜಿಲಾಡಿ ಗ್ರಾಮದ ನಿಷೇರು ನಿವಾಸಿ ರವೀಂದ್ರು ಅವರ ಪುತ್ರಿ ರಶ್ಮಿತಾ (18) ಮೃತ ವಿದ್ಯಾರ್ಥಿನಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ ಎನ್ನಲಾಗಿದೆ.
ಆರೋಗ್ಯವಾಗಿದ್ದ ರಶ್ಮಿತಾ ಗುರುವಾರ ರಾತ್ರಿ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಗಳನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.