ಪುತ್ತೂರು: ಪುತ್ತೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ವಿಚಾರ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಾಗೂ ಡಿವಿ ಸದಾನಂದ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ದ.ಕ ಜಿಲ್ಲೆಯ ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಫೋಟೋ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಅಳವಡಿಸಲಾಗಿದೆ. ನಳಿನ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಲಾಗಿದೆ.
‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ಬ್ಯಾನರ್ ಅಳವಡಿಸಲಾಗಿದೆ. ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.