News Karnataka Kannada
Thursday, April 18 2024
Cricket
ಮಂಗಳೂರು

ಬಿ.ಕೆ ಹರಿಪ್ರಸಾದ್’ರನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ- ಅಭಯಚಂದ್ರ ಜೈನ್

Make BK Hariprasad the minister in-charge of Dakshina Kannada district: Abhaychandra Jain
Photo Credit : News Kannada

ಮಂಗಳೂರು: ಬಿ.ಕೆ ಹರಿಪ್ರಸಾದ್ ರನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಒತ್ತಾಯ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಮೊಯ್ಲಿ, ಆಸ್ಕರ್, ಪೂಜಾರಿ ಯವರಂತಹ ನಾಯಕ ನಮಗೆ ಬೇಕು. ಈ ಜಿಲ್ಲೆಗೆ ಬಲಿಷ್ಠ ನಾಯಕ ಬೇಕು. ಇದನ್ನು ಹೈಕಮಾಂಡ್, ಕಾಂಗ್ರೆಸ್ ಪ್ರಮುಖರು ಇದನ್ನು ಅರಿಯಬೇಕು. ಬಿಕೆ ಹರಿಪ್ರಸಾದ್ ಅವರನ್ನು ಗೃಹ ಸಚಿವರನ್ನಾಗಿ ಮಾಡಬೇಕು. ದ.ಕ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿಯೂ ಮಾಡಬೇಕು ಎಂದು ಹೇಳಿದರು.

ಹರಿಪ್ರಸಾದ್ ಶಕ್ತಿವಂತ, ಆಡಳಿತದಲ್ಲಿ ತಿಳುವಳಿಕೆಯುಳ್ಳ ವ್ಯಕ್ತಿಯಾಗಿದ್ದಾರೆ. ಅವರು ಉಸ್ತುವಾರಿ ಮಂತ್ರಿ ಆದರೆ ಜಿಲ್ಲೆಯ ಅಭಿವೃದ್ಧಿಯಾಗುತ್ತದೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ ಜನರನ್ನು ಅವರು ಸಮಾನಾಗಿ ಕಾಣುತ್ತಾರೆ. ಹರಿಪ್ರಸಾದ್ ಗಡುಸಾಗಿ ಆಡಳಿತ ನಡೆಸುವ ವ್ಯಕ್ತಿಯಾಗಿದ್ದಾರೆ ಎಂದರು.

ಹರಿಪ್ರಸಾದ್ ಛಲದಂಕ ಮಲ್ಲ, 1978 ರಿಂದ ರಾಜಕೀಯದಲ್ಲಿ ಸಕ್ರೀಯವಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೊಟ್ಟರೆ ಜನ ಸಾಮರಸ್ಯದ ಜೀವನ ಮಾಡಬಹುದು. ಜಿಲ್ಲೆಗೆ ಶಕ್ತಿ ತುಂಬುವ ಕೆಲಸವನ್ನು ಬಿಕೆ ಹರಿಪ್ರಸಾದ್ ಮಾಡಲಿದ್ದಾರೆ.

ಯುಟಿ ಖಾದರ್ ಬಗ್ಗೆ ಮಾತನಾಡಿದ ಅವರು. ಖಾದರ್ ಅವರಿಗೂ ಒಳ್ಳೆಯ ಮಂತ್ರಿ ಸ್ಥಾನ ಸಿಗಬೇಕು. ಹರಿಪ್ರಸಾದ್ ಗೆ ಉಸ್ತುವಾರಿ ಸ್ಥಾನ, ಖಾದರ್ ಗೆ ಮಂತ್ರಿ ಸ್ಥಾನ ಕೊಡಬೇಕು. ಯುಟಿ ಖಾದರ್ ಸೌಮ್ಯ ಸ್ವಭಾವದ ವ್ಯಕ್ತಿ, ಡ್ಯಾಶಿಂಗ್ ನೇಚರ್ ಇಲ್ಲ. ಖಾದರ್ ಮೇಲೆ ಕೋಮು ಭಾವನೆ ತೋರಿಸಿ ಅವರನ್ನು ಸ್ತಬ್ಧ ಮಾಡುತ್ತಾರೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು