News Kannada
Saturday, February 24 2024
ಮಂಗಳೂರು

ಮಂಗಳೂರು| ಪೌರ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಕೊಡಿ: ಸರಕಾರಕ್ಕೆ ಅಮ್ಅದ್ಮಿ ಪಕ್ಷ ಆಗ್ರಹ

Mangalore| Am Aadmi Party urges govt to provide proper facilities to sanitation workers
Photo Credit : News Kannada

ಮಂಗಳೂರು: ಪೌರ ಕಾರ್ಮಿಕರ ಸೇವಾ ಖಾಯಮಾತಿ, ಸಮಾನ ವೇತನ, ಇತರ ಬೇಡಿಕೆಗಳನ್ನು ಈಡೇರಿಸಲು ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಕೂಡಲೇ ಸರಕಾರ ಸ್ಪಂದನೆ ನೀಡಬೇಕು  ದ.ಕ ಜಿಲ್ಲಾ ಅಮ್ ಅದ್ಮಿ ಪಕ್ಷ ಒತ್ತಾಯಿಸಿ ದ.ಕ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಅಗ್ರಹ ಪತ್ರ ನೀಡಲು ದ.ಕ ಜಿಲ್ಲೆಯ ಪಕ್ಷದ ಅಧ್ಯಕ್ಷರಾದ ಸಂತೋಷ್ ಕಾಮತ್  ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ  ಸಭೆಯಲ್ಲಿ ಎಲ್ಲಾ ಮುಖಂಡರು ಸರ್ವ ರೀತಿಯ ಬೆಂಬಲ ನೀಡಲು ತೀರ್ಮಾನ ಕೈಗೊಳ್ಳಲಾಯಿತು .

“ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಪೌರ ಕಾರ್ಮಿಕರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದೆ. ಅನೇಕರನ್ನು ಶಾಸಕರನ್ನಾಗಿ ಮಾಡಿದೆ. ಈ ಮೂಲಕ ಪೌರ ಕಾರ್ಮಿಕರ ಭಾವನೆಗಳಿಗೆ ರಾಜಕೀಯ ಬಲ ದೊರಕಿಸಿಕೊಡುವಲ್ಲಿ ಪಕ್ಷ ಸಫಲವಾಗಿದೆ”. ಈ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆಯಲ್ಲೂ ಕಾರ್ಮಿಕರಿಗೆ ರಾಜಕೀಯ ಬಲ ನೀಡಲು ದ.ಕ ಅಮ್ ಅದ್ಮಿ ಪಕ್ಷ ಸದಾ ಸಿದ್ದವಾಗಿದೆ.

“ಕರ್ನಾಟಕದಲ್ಲಿನ ಆಡಳಿತಾರೂಢ ಬಿಜೆಪಿಗೆ ಪೌರ ಕಾರ್ಮಿಕರ ನೋವು ಕಾಣಿಸುತ್ತಿಲ್ಲ. ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಿರಲಿ, ಸಮಸ್ಯೆಗೆ ಸ್ಪಂದಿಸುವ ಕನಿಷ್ಠ ಸೌಜನ್ಯವನ್ನು ಪ್ರದರ್ಶಿಸಿಲ್ಲ. ಹೀಗಾಗಿ ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಗಮನಹರಿಸಿದ ಬಿಜೆಪಿ ನೇತೃತ್ವದ ಸರ್ಕಾರವು ಮೊಂಡುತನ ಪ್ರದರ್ಶಿಸುತ್ತಿದೆ”

ಪೌರ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಕೊಡಿ
ರಾಜಧಾನಿಯ ಸ್ವಚ್ಛತೆ ಮತ್ತು ನೈರ್ಮಲ್ಯತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಸರ್ಕಾರ ಸಮರ್ಪಕ ಅಗತ್ಯ ಸಲಕರಣೆಗಳನ್ನು ನೀಡಿಲ್ಲ. ನಿತ್ಯ ಕಾರ್ಯಕ್ಕೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಅರೋಗ್ಯ ಸಮಸ್ಯೆಗಳಿಗೆ ಉತ್ತಮ ವೈದ್ಯಕೀಯ ಉಪಚಾರ, ಗ್ರಾಚ್ಯುಟಿ, ಹೆರಿಗೆ ಭತ್ಯೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಬೇಕು.

ಅಲ್ಲದೇ, ಅಗತ್ಯವಿರುವಲ್ಲಿ ಅವರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಅವರಿಗೆ ರಜಾ ಸೌಲಭ್ಯ ನೀಡಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಬೇಕು. ಇಂತಹ ವ್ಯವಸ್ಥೆ ಇಲ್ಲದೇ ತೊಂದರೆಗೀಡಾದ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವತ್ತ ಗಮನ ನೀಡಬೇಕು’

ಒಂದು ದಿನ ಪೌರ ಕಾರ್ಮಿಕರು ಕೆಲಸಕ್ಕೆಂದು ರಸ್ತೆಗಿಳಿಯದೇ ಹೋದರೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಉಲ್ಭಣಗೊಂಡು ಜನ ಮೂಗು ಮುಚ್ಚಿಕೊಂಡು ಓಡಾಡಬೇಕಾಗುತ್ತದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರ ಕಾರ್ಮಿಕರಿಗೆ ಅಲ್ಪ ಪ್ರಮಾಣದ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸಿಕೊಳ್ಳಲು ಅವರಿಂದ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರನ್ನು ಖಾಯಂ ನೇಮಕಾತಿ ಮಾಡಬೇಕು’

೨೦೧೭ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಅನುಮೋದನೆ ನೀಡಿತೇ ಹೊರತು ಅನುಷ್ಠಾನಕ್ಕೆ ತರಲಿಲ್ಲ. ಬಳಿಕ ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳು ಕೂಡ ಈ ಬಗ್ಗೆ ಗಮನ ಹರಿಸಲಿಲ್ಲ. ಪೌರ ಕಾರ್ಮಿಕರ ವಿಶೇಷ ನೇಮಕಾತಿ ನಿಯಮ ೨೦೧೭ರಲ್ಲಿ ರಸ್ತೆ ಸ್ವಚ್ಛಗೊಳಿಸುವವರನ್ನು ಮಾತ್ರ ಪೌರ ಕಾರ್ಮಿಕರೆಂದು ಪರಿಗಣಿಸಲಾಗಿದೆ ಇತರ ಕಾರ್ಮಿಕರಿಗೂ ಸರ್ಕಾರಿ ಸೌಲಭ್ಯ ಸಿಗಬೇಕು.

ಪೌರ ಕಾರ್ಮಿಕರಂತೆ ನಗರದ ಸೌಂದರ್ಯಕ್ಕಾಗಿ ಸಹಾಯಕ ಗುತ್ತಿಗೆ ಆಧಾರದಲ್ಲೇ ವರ್ಷಗಳಿಂದಲೂ ಬದುಕು ಸಾಗಿಸುತ್ತಿರುವ ಒಳಚರಂಡಿ ಶುಚಿಗೊಳಿಸುವ ಕಾರ್ಮಿಕರು, ಕಸ ತೆಗೆಯುವವರು, ಕಸದ ಲಾರಿ ಚಾಲಕರು, ಕಸ ಲೋಡ್ ಮಾಡುವವರು ಸೇರಿದಂತೆ ಇನ್ನಿತರ ಕಾರ್ಮಿಕರು ನಗರದಲ್ಲಿದ್ದಾರೆ. ಅವರಿಗೂ ಸಹ ಸರ್ಕಾರದ ಎಲ್ಲ ಸೌಲಭ್ಯಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ದ.ಕ ಜಿಲ್ಲೆಯ ಅಮ್ ಅದ್ಮಿ ಪಕ್ಷ ಸರಕಾರವನ್ನು ಒತ್ತಾಯಿಸುತ್ತಿದೆ.

ಪ್ರತಿಭಟನಾ ನಿರತ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಭೇಟಿ

ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಪೌರಕಾರ್ಮಿಕರು , ವಾಹನ ಚಾಲಕರು ಹಾಗೂ ಸೂಪರ್ವೈಸರ್ ಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ ನಾಲ್ಕು ದಿನದಿಂದ ನಿರಂತರ ಪ್ರತಿಭಟನೆಯನ್ನು ನಡೆಸುತ್ತಿದ್ದು ಇಂದು ಪ್ರತಿಭಟನಾ ನಿರತ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು.

ಬಳಿಕ ಕೂಡಲೇ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಪೌರಕಾರ್ಮಿಕರ ಬೇಡಿಕೆಗಳನ್ನು ಆದಷ್ಟು ಶೀಘ್ರವಾಗಿ ಈಡೇರಿಸುವಂತೆ ಮನವಿಯನ್ನು ಮಾಡಿದರು . ಈ ಸಂದರ್ಭ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲಿಯನ್ , ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ , ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ , ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರಾದ ಶಂಸುದ್ದೀನ್ , ಕೇಶವ ಮರೋಳಿ , ಅಶ್ರಫ್ ಬಜಲ್ , ಹಾಗೂ ಹಿಂದುಳಿದ ವರ್ಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು