ಮಂಗಳೂರು: ಹೊರವಲಯದ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಅಣಬೆ ಉತ್ಪಾದನಾ ಫ್ಯಾಕ್ಟರಿಯಿಂದ ಸ್ಥಳೀಯ ನಾಗರಿಕರಿಗೆ ಅನಾರೋಗ್ಯ ಸಮಸ್ಯೆ ಎದುರಾಗುತ್ತಿದ್ದು, ತಕ್ಷಣ ಮುಚ್ಚುವಂತೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಎರಡನೆಯ ದಿನದ ಪ್ರತಿಭಟನೆಯಲ್ಲಿ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದರು.
ಶುಕ್ರವಾರ ಪ್ರತಿಭಟನಾ ನಿರತರೊಂದಿಗೆ ಸ್ಥಳದಲ್ಲಿಯೇ ಕುಳಿತು ಸಮಸ್ಯೆಯನ್ನು ಬಗೆಹರಿಸುವ ಕುರಿತಂತೆ ಸ್ಥಳೀಯರೊಂದಿಗೆ ಚರ್ಚಿಸಿದರು.
ಇಲ್ಲಿ ಸಿಂಪಡಣೆಯಾಗುತ್ತಿರುವ ರಾಸಾಯನಿಕ ವಸ್ತುಗಳಿಂದ ವಾಂತಿ ತಲೆನೋವು ಮಾನಸಿಕ ಖಿನ್ನತೆ ಊಟದ ಸಂದರ್ಭ ಸಮಸ್ಯೆ ಮತ್ತಿತರ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ.
ವೈದ್ಯನಾಗಿ ತನಗೂ ಇದರ ಅರಿವಾಗಿದ್ದು ಜಿಲ್ಲಾಧಿಕಾರಿಯವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರ ಸಮಸ್ಯೆಗೆ ಅಂತ್ಯ ಹಾಡಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.