ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳಾರ ವಾರ್ಡಿನ ಮೋರ್ಗನ್ಸ್ ಗೇಟ್, ಶೆಟ್ಟಿಬೆಟ್ಟು ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ಭರ್ಜರಿ ಮತಯಾಚನೆ ನಡೆಸಿದರು.
“ಮಂಗಳೂರು ನಗರ ದಕ್ಷಿಣ ಕ್ಷೇತ್ರವನ್ನು ಅಭಿವೃದ್ಧಿ ಮೂಲಕ ಮಾದರಿ ಕ್ಷೇತ್ರವನ್ನಾಗಿಸೋಣ. ಈ ನಿಟ್ಟಿನಲ್ಲಿ ದಯವಿಟ್ಟು ಬಿಜೆಪಿಗೆ ಮತ ನೀಡುವ ಮೂಲಕ ನಮ್ಮ ಜೊತೆ ಕೈ ಜೋಡಿಸಿ” ಎಂದು ವೇದವ್ಯಾಸ ಕಾಮತ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.