News Karnataka Kannada
Thursday, April 25 2024
Cricket
ಮಂಗಳೂರು

ಮಂಗಳೂರು: ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕ ನೇಣಿಗೆ ಶರಣು

Mangaluru: Four members of a family commit suicide
Photo Credit : News Kannada

ಮಂಗಳೂರು: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನದ ಚಾಲಕನೋರ್ವ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಚಾಲಕನನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ. ಇವರು ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ವಾಸವಾಗಿದ್ದಾರೆ. ಈ ಹಿಂದೆ ಆರೋಗ್ಯ ಇಲಾಖೆಯ ವಾಹನದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿದ್ದರು ಎಂದು ತಿಳಿದು ಬಂದಿದೆ. ಗುರುವಾರ ತನ್ನ ಮನೆಯ ಮಹಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾಲಕೃಷ್ಣ ಅವರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು