News Kannada
Saturday, February 24 2024
ಮಂಗಳೂರು

ಮಂಗಳೂರು: ಇಂಡಿಯಾನ ಆಸ್ಪತ್ರೆ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಯುವಕ ಅರೆಸ್ಟ್

ಭಾಲ್ಕಿ ತಾಲ್ಲೂಕಿನ ಮಳಚಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಾಂದಲೆ ಮಾಡಿ, ಕಲ್ಲು ತೂರಾಟ ನಡೆಸಿದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Photo Credit : IANS

ಮಂಗಳೂರು: ರೋಗಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದಿರುವ ಘಟನೆ ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕದ್ರಿ ವ್ಯಾಸನಗರ ನಿವಾಸಿ ಆಶಿಕ್ (32) ಬಂಧಿತ ಆರೋಪಿ. ಸೆ.25ರಂದು ಸಂಜೆ ಆಶಿಕ್ ತನ್ನ ತಾಯಿಯನ್ನು ತಪಾಸಣೆಗೆಂದು ಇಂಡಿಯಾನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಈ ವೇಳೆ ಆಸ್ಪತ್ರೆಯ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳಾ ಸಿಬ್ಬಂದಿ ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಆಶೀಕ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿ ಮಹಿಳೆಯನ್ನು ದೂಡಿ ಮೈಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ.

ಜೊತೆಗೆ ಅಡಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು