News Kannada
Saturday, February 24 2024
ಮಂಗಳೂರು

ಮಂಗಳೂರು: ಆ.20ರಂದು ಡಿ. ದೇವರಾಜ್ ಅರಸು ಅವರ ಜನ್ಮ ದಿನಾಚರಣೆ

Mangaluru: On August 20, 2018 Birth Anniversary of Devaraj Urs
Photo Credit :

ಮಂಗಳೂರು, ಆ.16(ಕ.ವಾ): ಇದೇ ಆ.20ರಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆಯನ್ನು ಈ ಬಾರಿ ಹಿಂದುಳಿದ ವರ್ಗಗಳ ದಿನಾಚರಣೆ ಎಂದು ಆಚರಿಸಿ ಜಿಲ್ಲಾ ಮಟ್ಟದಲ್ಲಿಯೂ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆ.16ರ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯ ಮಟ್ಟದಲ್ಲಿ ಮಾತ್ರ ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ದೇವರಾಜ್ ಅರಸು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿತ್ತು, ಇದೀಗ ಜಿಲ್ಲಾ ಮಟ್ಟದಲ್ಲಿಯೂ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ, ಆ.20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುವುದು. ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ, ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿವೆ, ಅದರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಹಾಗೂ ಇತರರನ್ನು ಒಳಗೊಂಡಿರುತ್ತದೆ, ಪ್ರಶಸ್ತಿಯು 50,000 ರೂ. ಗಳ ನಗದು ಒಳಗೊಂಡಿರುತ್ತದೆ ಎಂದರು.

ಅರಸು ಅವರ ಜನ್ಮದಿನಾಚರಣೆ ಹಿನ್ನಲೆಯಲ್ಲಿಯೇ ಆ. 20 ರಿಂದ 22 ರವರೆಗೆ ಮೂರು ದಿನಗಳು ಅರಸು ಉತ್ಸವವನ್ನು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗುವುದು, ಆ.20ರ ಮಧ್ಯಾಹ್ನದಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ, ಈ ಉತ್ಸವದಲ್ಲಿ ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳಾದ ಕುಲಕಸುಬುಗಾರರಿಂದ ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಸ್ಥಾಪಿಸಲಾಗುತ್ತದೆ ಹಾಗೂ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮತ್ತು ಮುಖಂಡ ಆರ್.ಸಿ. ನಾರಾಯಣ್ ಗೋಷ್ಠಿಯಲ್ಲಿದ್ದರು.

Photo credit: Ramachandra Bhat

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು