News Kannada
Saturday, February 24 2024
ಮಂಗಳೂರು

ಮಂಗಳೂರು: 90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ಹೊಂದಿದ್ದ ಮೂವರ ಬಂಧನ

Mangaluru: Rs 90 lakh Three arrested for possessing ambergris worth Rs 1,000 crore
Photo Credit : News Kannada

ಮಂಗಳೂರು: ಅಂಬರ್ ಗ್ರೀಸ್ ( ತಿಮಿಂಗಿಲ‌ವಾಂತಿ) ಹೊಂದಿದ್ದ ಮೂವರನ್ನು ನಗರದ ಪಣಂಬೂರು ಬೀಚ್ ವ್ಯಾಪ್ತಿಯಿಂದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ಸೋಮವಾರ(ಸೆ.11) ವರದಿಯಾಗಿದೆ.

ಉಡುಪಿ ಜಿಲ್ಲೆ ಸಾಲಿಗ್ರಾಮ ಗ್ರಾಮದ ಜಯಕರ(39), ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆದಿತ್ಯ(25), ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಲೋಹಿತ್ ಕುಮಾರ್ ಗುರಪ್ಪನವರ್(39) ಬಂಧಿತರಾಗಿದ್ದಾರೆ. ಬಂಧಿತರಿಂದ 90 ಲಕ್ಷ ರೂ. ಮೌಲ್ಯದ 900ಗ್ರಾಂ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೂವರು ಪಣಂಬೂರು ಬೀಚ್ ಬಳಿ ಅಂಬರ್ ಗ್ರೀಸ್ ಹೊಂದಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ ಅಂಬರ್ ಗ್ರೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು