News Kannada
Saturday, February 24 2024
ಮಂಗಳೂರು

ಮಂಗಳೂರು: ‘ಸ್ವ ಉದ್ಯೋಗ ಮಾಹಿತಿ ಶಿಬಿರ’

Photo Credit : News Kannada

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ‘ಸ್ವ ಉದ್ಯೋಗ ಮಾಹಿತಿ ಶಿಬಿರ’ 21-09-2022 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬೆಂದೂರ್ ವೆಲ್ ನಲ್ಲಿರುವ ತೋಟಗಾರಿಕಾ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ .ವಿ.ರಾಜೇಂದ್ರ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ,ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್ ಆರ್.ನಾಯ್ಕ್ , ದ.ಕ ಪಶು ಸಂಗೋಪನಾ ಇಲಾಖಾ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್, ಮೀನುಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ದಿಲೀಪ್ ಕುಮಾರ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ

ಪತ್ರ ಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿ ಗಳಿಂದ ಜೇನು ಕೃಷಿ,ಅಣಬೆ ಕೃಷಿ, ಹೈನುಗಾರಿಕೆ,ಕೋಳಿ ಸಾಕಾಣಿಕೆ , ಮೀನುಗಾರಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು