News Kannada
Friday, March 01 2024
ಮಂಗಳೂರು

ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್ ಐ ಎ ದಾಳಿ

Bangla to Bengaluru illegal migration: NIA arrests man in Kerala
Photo Credit : IANS

ಮಂಗಳೂರು: ನಿಷೇದಿತ ಪಿ ಎಫ್ ಐ ಸಂಘಟನೆಗೆ ವಿದೇಶದಿಂದ ಫಂಡಿಗ್ ಬರುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್ ಐ ಎ ದಾಳಿ ನಡೆಸಿದೆ.

ಕೇರಳದಲ್ಲಿ ಧಾರ್ಮಿಕ ಶಿಕ್ಷಕನಾಗಿರುವ  ಇಬ್ರಾಹಿಂ ಎಂಬವರ ಮನೆಯಲ್ಲಿ ಎನ್ ಐ ಎ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ. ಪಿ ಎಫ್ ಐ ನಿಷೆಧದ ಬಳಿಕ ತಲೆ ಮರೆಸಿಕೊಂಡಿರುವ ಇಬ್ರಾಹಿಂ ಮನೆಯಲ್ಲಿ  ಕೆಲ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ದಾಳಿ ಸಂದರ್ಭದಲ್ಲಿ ಇಬ್ರಾಹಿಂ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

ಈ ಹಿಂದೆ ನಿಷೇಧಿತ ಪಿ ಎಫ್ ಐ ಸಂಘಟನೆಯ ಫಂಡಿಂಗ್ ನೆಟ್ವರ್ಕ್ ಭೇಧಿಸಿದ್ದಎನ್ ಐ ಎ, ಬಂಧಿತರ ವಿಚಾರಣೆ ಸಂದರ್ಭದಲ್ಲಿ ಇಬ್ರಾಹಿಂ ಹೆಸರು ಪ್ರಸ್ತಾಪವಾಗಿತ್ತು. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಜೊತೆ ಇಬ್ರಾಹಿಂ ಗೆ ಲಿಂಕ್ ಇತ್ತು ಎನ್ನಲಾಗಿದೆ.

ಮಂಗಳೂರು ಹೊರವಲಯದ ಒಳಚ್ಚಿಲ್ ಪದವುನ ಮುಸ್ತಾಕ್ ಮತ್ತು ಬಂಟ್ವಾಳದ ಮೆಲ್ಕಾರ್ ನ ಇಬ್ರಾಹಿಂ ನಂದಾವರ ಎಂಬವರ ಮನೆಯಲ್ಲಿ ಎನ್ ಐ ಎ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು