News Karnataka Kannada
Wednesday, April 24 2024
Cricket
ಮಂಗಳೂರು

ಪುತ್ತೂರು ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಚಿಹ್ನೆ, ಪ್ರಧಾನಿ ಹೆಸರು ದುರ್ಬಳಕೆ ದೂರು

Bidar: 60 nominations filed by 51 candidates
Photo Credit : News Kannada

ಪುತ್ತೂರು: ವಿಧಾನಸಭೆ ಚುನಾವಣೆಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿಯ ಚಿಹ್ನೆ, ಪಕ್ಷದ ಹೆಸರು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್‌ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ತನ್ನ ಪ್ರಚಾರ ಸಾಮಗ್ರಿ, ಸಾಮಾಜಿಕ ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು, ಭಾವಚಿತ್ರವನ್ನು ಉಪಯೋಗಿಸುತ್ತಿದ್ದಾರೆ.

ಓರ್ವ ಅಭ್ಯರ್ಥಿ ಚುನಾವಣಾ ಆಯೋಗ ತನಗೆ ನೀಡಿದ ಚಿಹ್ನೆಯನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಪಕ್ಷೇತರ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿಯ ಚಿಹ್ನೆ, ಇತರ ನೋಂದಣಿಗಳನ್ನು ಉಪಯೋಗಿಸುತ್ತಿರುವುದು ನೀತಿ ಸಂಹಿತೆ ಉಲ್ಲಂಘನೆ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು