News Kannada
Saturday, February 24 2024
ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆ

rain
Photo Credit : News Kannada

ಮಂಗಳೂರು:  ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ. ಉಳಿದಂತೆ ಕೆಲವು ನಗರಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.

ಉಪ್ಪಿನಂಗಡಿ, ಕೆಂಭಾವಿ, ಕುರ್ಡಿ, ಕೊಟ್ಟಿಗೆಹಾರ, ಕೆಆರ್ ಸಾಗರ, ಕುಡುಗೋಡು, ಕೂಡ್ಲಿಗಿ, ಸುಳ್ಯ, ಕದ್ರಾ, ಯಲ್ಲಾಪುರ, ಮಳವಳ್ಳಿ, ಹೊಸಪೇಟೆ, ಹಡಗಲಿ, ಮಂಡ್ಯದಲ್ಲಿ ಮಳೆಯಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ-ಗುಡುಗು ಸಹಿತ ಮಲೆಯಾಗುವ ಸಾಧ್ಯತೆ ಇದೆ.

ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ, ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು