News Karnataka Kannada
Friday, April 26 2024
ಮಂಗಳೂರು

ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖ ಮನೆಗಳಿಗೆ ಭೇಟಿ ನೀಡಿ ರಾಜೇಶ್ ನಾಯ್ಕ್ ಮತಯಾಚನೆ

Rajesh Naik seeks votes at SCST Colony under Baltila gram panchayat
Photo Credit : News Kannada

ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್.ಎಸ್ಟಿ ಕಾಲೋನಿ ಹಾಗೂ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಅಭಿವೃದ್ಧಿಯನ್ನು ಕರ್ತವ್ಯ ಎಂದು ಮಾಡಿದ್ದೇನೆ, ಅದರ ಜೊತೆಗೆ ಕ್ಷೇತ್ರದ ಜನರೊಂದಿಗೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಮಾಡಿದ್ದೇನೆ, ಇನ್ನು ಮುಂದೆಯೂ ಇದೇ ರೀತಿ ಕ್ಷೇತ್ರದ ಜನರ ಸೇವಕನಾಗಿ ಕೆಲಸ ಮಾಡಲು ಅಧಿಕಾರ ನೀಡಿ ಎಂದು ಮನವಿ ಮಾಡಿದರು.

ಭಾರತವನ್ನು ವಿಶ್ವಗುರು ಮಾಡಲು ಹೊರಟ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕೇಂದ್ರದಲ್ಲಿ ಶಕ್ತಿವಂತರಾಗಿ ಮಾಡಲು ಬಂಟ್ವಾಳ ದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಅವರು ತಿಳಿಸಿದರು.

ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ ಮಾತನಾಡಿ, ರಾಜೇಶ್ ನಾಯ್ಕ್ ಅವರು ಬಂಟ್ವಾಳ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮಾತನಾಡಿ ಎಂದು ಕಾಂಗ್ರೆಸ್ ನವರಿಗೆ ಸವಾಲೆಸದರು. ಕಳೆದ 30 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ರಾಜೇಶ್ ನಾಯ್ಕ್ ಅವರು 5 ವರ್ಷಗಳಲ್ಲಿ ಶಾಸಕತ್ವದ ಪ್ರಥಮ ಅವಧಿಯಲ್ಲಿ ಮಾಡಿದ್ದಾರೆ ಎಂಬುದು ನಮಗೆ ಹೆಗ್ಗಳಿಕೆ ಎಂದರು.

ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್ ಮಾತನಾಡಿ, ಬಾಳ್ತಿಲ ಗ್ರಾಮದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ ರಾಜೇಶ್ ನಾಯ್ಕ್ ಅವರನ್ನು ಮುಂದಿನ ಅವಧಿಯಲ್ಲಿ ವಿರೋಧಿಗಳಿಗೆ ನಡುಕ ಹುಟ್ಟಿಸುವ ರೀತಿಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ತೋರಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಹಿರಣ್ಮಿಯಿ, ಸದಸ್ಯರಾದ ಶಿವರಾಜ್, ವಿಠಲ ನಾಯ್ಕ್, ಚಂದ್ರಶೇಖರ್ ಚೆಂಡೆ, ಅಶೋಕ್ ಕುಮಾರ್ ನೀರಪಾದೆ, ಚೈತ್ರ ಕಶೆಕೋಡಿ, ಲತೀಶ್ ಕುರ್ಮಾನ್, ಜ್ಯೋತಿ ಕಡ್ಮಡ್ಕ, ಆನಂದ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಪಿ‌ಎಸ್. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು