News Kannada
Saturday, February 24 2024
ಮಂಗಳೂರು

ಬಂಟ್ವಾಳ: ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತ

road-waterlogged-at-kudtamugeru-in-kolnadu-village-due-to-heavy-rains
Photo Credit : By Author
ಬಂಟ್ವಾಳ :  ವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ  ಜಲಾವೃತಗೊಂಡಿತ್ತು. ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತು.
ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿನ ಈ  ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.
ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ‌. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು