News Karnataka Kannada
Wednesday, April 17 2024
Cricket
ಮಂಗಳೂರು

ರನ್‌ವೇ ಲೈಟ್‌ ಆಫ್‌: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತ

Runway light off: Operations halted at Mangalore airport
Photo Credit :

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ಏರ್ಪೋರ್ಟ್ ರನ್ ವೇಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನಿಂದ ಇಂಡಿಗೋ 6E5188 ವಿಮಾನವನ್ನು ಕಣ್ಣೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್‌ ಆಗಿದೆ. ವಿದ್ಯುತ್ ವೈಫಲ್ಯದಿಂದ ಮಂಗಳೂರು ಏರ್ಪೋರ್ಟ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ರನ್ ವೇ ದೀಪಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಲೈಟ್ಸ್ ಆಫ್ ಆಗಿದೆ. ನಂತರ ಎಟಿಸಿ ಸೂಚನೆ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿಗೆ ವಿಮಾನ ವಾಪಸಾಗಿದ್ದು, ಅಲ್ಲಿ ಲ್ಯಾಂಡ್‌ ಆಗಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಏರ್ಪೋರ್ಟ್ ನಲ್ಲಿ ಲ್ಯಾಂಡಿಂಗ್, ಟೇಕಾಫ್ ಸ್ಥಗಿತ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಸರಿಪಡಿಸಿ ಮತ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಏರ್ ಪೋರ್ಟ್ ಸಿಬ್ಬಂದಿಯಿಂದ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಚೆನ್ನೈ ಹಾಗೂ ಬೆಂಗಳೂರಿನಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ವಿಳಂಬವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು