ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದು, ಈ ಬಗ್ಗೆ ಶಾಸಕರು ಗರಂ ಆಗಿದ್ದು “24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಇದೀಗ ಶಾಸಕರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಈ ನಿಟ್ಟಿನಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ.