News Kannada
Saturday, February 24 2024
ಮಂಗಳೂರು

ಏ.20ಕ್ಕೆ ನಾಮಪತ್ರ ಸಲ್ಲಿಕೆ, ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ: ರಮಾನಾಥ ರೈ

Photo Credit : News Kannada

ಬಂಟ್ವಾಳ: ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಏಪ್ರಿಲ್ 20ರಂದು  ನಾಮಪತ್ರ ಸಲ್ಲಿಸಲಿದ್ದೇನೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿನಂತಿಸಿದರು. ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದರು.

ಗುರುವಾರ ಬೆಳಗ್ಗೆ 9 ಗಂಟೆಗೆ ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದ ಬಳಿಯಿಂದ ಪಾದಯಾತ್ರೆಯ ಮೂಲಕ ಮೆರವಣಿಗೆ ಹೊರಟು, ಮಧ್ಯಾಹ್ನ 12.35ಕ್ಕೆ ಮಿನಿವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ತಾಲೂಕು ಕೇಂದ್ರಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ಕಟ್ಟಡಗಳು ತಮ್ಮ ಅವಧಿಯಲ್ಲಿ ನಿರ್ಮಿಸಲ್ಪಟ್ಟಿವೆ. ಮಿನಿವಿಧಾನಸೌಧ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಅಂಬೇಡ್ಕರ್ ಭವನ ಸಹಿತ ಹಲವು ಕಟ್ಟಡಗಳು, ಪುರಸಭೆ ವ್ಯಾಪ್ತಿಯ ಬಹುತೇಕ ರಸ್ತೆಗಳು ತಮ್ಮ ಅವಧಿಯಲ್ಲಿ ಅಭಿವೃದ್ಧಿ ಪಡಿಸಲ್ಪಟ್ಟಿವೆ. ತಾವು ಆರಂಭಿಸಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಇನ್ನೂ ಪೂರ್ಣಗೊಳ್ಳದೆ ನಿರ್ಲಕ್ಷಿಸಲ್ಪಟ್ಟಿವೆ. ಈ ಬಾರಿ ಅವುಗಳನ್ನು ಪೂರ್ಣಗೊಳಿಸಲಾಗುವುದು ಎಂದು   ತಿಳಿಸಿದರು.

ಕೆ.ಪಿ.ಸಿ.ಸಿ. ಸದಸ್ಯ ರಾದ  ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ಪ್ರಮುಖರಾದ ಪದ್ಮಶೇಖರ್ ಜೈನ್, ಸುರೇಶ್ ಬಿ. ನಾವೂರು, ಮಾಯಿಲಪ್ಪ ಸಾಲ್ಯಾನ್, ಸಂಜೀವ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ನಾರಾಯಣ ನಾಯ್ಕ, ಅಬ್ಬಾಸ್ ಅಲಿ, ಪುರಸಭೆ ಅಧ್ಯಕ್ಷ ಮುಹಮ್ಮದ್ ಶರೀಫ್, ಜಯಂತಿ ಪೂಜಾರಿ, ಪುರಸಭೆಸದಸ್ಯರುಗಳಾದ ವಾಸು ಪೂಜಾರಿ, ಸಿದ್ದೀಕ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು