News Karnataka Kannada
Saturday, April 20 2024
Cricket
ಮಂಗಳೂರು

ಉಳ್ಳಾಲ: ಜೂ.1 ರಂದು ವಿವಾಹವಾಗಬೇಕಿದ್ದ ವರ ನಾಪತ್ತೆ

Ullal: Groom who was supposed to get married on June 1 goes missing
Photo Credit : News Kannada

ಉಳ್ಳಾಲ: ನಾಳೆ (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದೆ. ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು ವಧೂ ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.

ತೌಡುಗೋಳಿ- ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ‌ ಐತಪ್ಪ ಶೆಟ್ಟಿ ಅವರ ಸುಪುತ್ರ ಕಿಶನ್ ಶೆಟ್ಟಿ ನಾಪತ್ತೆಯಾದ ವರ. ನಾಳೆ ಜೂ.‌1ರ, ಗುರುವಾರದಂದು ಕಿಶನ್ ಶೆಟ್ಟಿಗೆ ಉಪ್ಪಳ ಮೂಲದ ಪ್ರಸ್ತುತ ಜಪ್ಪಿ‌ನಮೊಗರಿನಲ್ಲಿರುವ ಕುಟುಂಬವೊಂದರ ಉಪನ್ಯಾಸಕಿಯೊಂದಿಗೆ ವಿವಾಹ ನಿಗದಿಯಾಗಿತ್ತು. ವಧುವಿನ ಮನೆಯಲ್ಲಿ ಅದಾಗಲೇ ಅದ್ಧೂರಿ ಮೆಹಂದಿ ಶಾಸ್ತ್ರ ಮುಗಿದಿದ್ದು ವರನ ಮನೆಯಲ್ಲಿ ನಿನ್ನೆ (ಮಂಗಳವಾರ) ನಡೆಯಬೇಕಿದ್ದ ಮೆಹಂದಿ ಶಾಸ್ತ್ರಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನ ಹಣ್ಣು ತರಲೆಂದು ವರ ಸ್ಕೂಟರ್ ಏರಿ ಮನೆಯಿಂದ ಹೊರಟಿದ್ದ.‌ ಆ ಬಳಿಕ ದೇರಳಕಟ್ಟೆ ತಲುಪುತ್ತಿದ್ದಂತೆಯೇ ಪೊಲೀಸ್ ಮೂಲಗಳ ಪ್ರಕಾರ ಸುಮಾರು ಅರ್ಧ ತಾಸು ಯಾರಲ್ಲಿಯೋ ಫೋನಲ್ಲಿ ಮಾತನಾಡಿದ್ದನಂತೆ.ಆ ಬಳಿಕ ನಾಪತ್ತೆಯಾದ ವರ ಇನ್ನೂ ಮನೆಗೆ ಬಂದಿಲ್ಲ. ಎರಡೂ ಕುಟುಂಬ ಆರ್ಥಿಕವಾಗಿ ಸ್ಥಿತಿವಂತರಾಗಿದ್ದು ವಧು ವರರ ಮನೆಯಲ್ಲಿ ಸಂಭ್ರಮ ತುಂಬಿ ತುಳುಕಬೇಕಾಗಿತ್ತಾದರೂ ವರನ ನಾಪತ್ತೆ ಪ್ರಕರಣ ದಿಗ್ಭ್ರಮೆ ಮೂಡಿಸಿದೆ.

ಕೊಣಾಜೆ ಠಾಣೆಯಲ್ಲಿ ಕಿಶನ್ ತಂದೆ ಐತಪ್ಪ ಶೆಟ್ಟಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು