ಮಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ದಕ್ಷಿಣ ಮಂಡಲದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ. ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗ ವಿದ್ಯುತ್ ದರ ಯುನಿಟ್ ಗೆ ೭೫ ಶೇ ಹೆಚ್ಚಳ ಮಾಡಲಾಗಿದೆ. ಉಚಿತ ಭಾಗ್ಯದ ಗಡಿಬಿಡಿಯಲ್ಲಿ ರಾಜ್ಯ ಬೊಕ್ಕಸಕ್ಕೆ ಕೈಹಾಕಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಬಿಜೆಪಿ ರಾಜ್ಯದ ಜನತೆಗೆ ನೀಡಿದ ಅಭಿವೃದ್ಧಿ ಯೋಜನೆಗಳನ್ನು ಸ್ಥಗಿತ ಮಾಡಿದ್ದೀರಿ. ನಿಮ್ಮ ಅಪ್ಪನ ಮನೆ ಆಸ್ತಿಯಂತೆ ಕಾಮಗಾರಿ ನಿಲ್ಲಿಸಲು ಸೂಚನೆ ನೀಡಿದ್ದೀರಿ. ಇದು ನಿಮ್ಮ ಅಪ್ಪನ ಮನೆ ಆಸ್ತಿಯಲ್ಲ. ನಿಮಗೆ ತಾಕತ್ತು ಇದ್ದರೆ ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಜಾರಿ ಮಾಡಿ ಎಂದು ಸವಾಲು ಹಾಕಿದರು.