News Karnataka Kannada
Saturday, April 20 2024
Cricket
ಕರಾವಳಿ

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ರೈ ಮನವಿ

MLA Rai requested Home Minister to shift SP office to Puttur
Photo Credit :

ಪುತ್ತೂರು: ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ‌ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು