News Kannada
Tuesday, March 28 2023

ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ಗೌರವ ವಂದನೆ ಬೇಡ : ಸಿಎಂ ಬೊಮ್ಮಾಯಿ

Photo Credit :

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ‘ಗಾರ್ಡ್‌ ಆಫ್‌ ಆನರ್‌’(ಗೌರವ ವಂದನೆ) ಸಲ್ಲಿಕೆ ನಿಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಮೂಲಕ ‘ಗಾರ್ಡ್‌ ಆಫ್‌ ಆನರ್‌’ನಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಕಿರಿಕಿರಿ ತಪ್ಪಿದಂತಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರವಾಸದಲ್ಲಿರುವ ಅವರು ಗುರುವಾರ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಆದರೆ ಮಂಗಳೂರಿನಲ್ಲಿ ಮುಖ್ಯಮಂತ್ರಿಗೆ ‘ಗಾರ್ಡ್‌ ಆಫ್‌ ಆನರ್‌’ ನೀಡಲು ಮೊದಲೇ ಸರ್ವ ಸಿದ್ಧತೆ ಮಾಡಿಕೊಂಡಿದ್ದರಿಂದ ಅದನ್ನು ಸ್ವೀಕಾರ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ, ರೈಲು- ಬಸ್‌ ನಿಲ್ದಾಣಗಳಲ್ಲಿ ‘ಗಾರ್ಡ್‌ ಆಫ್‌ ಆನರ್‌’ ನೀಡಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಬೆಂಗಳೂರಿಗೆ ವಾಪಸಾದ ಕೂಡಲೇ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಪೊಲೀಸ್‌ ಸಮಾರಂಭದಲ್ಲಿ ಗೌರವ ವಂದನೆ ಕೊಟ್ಟರೆ ಸಾಕು ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು. ಹೀಗಾಗಿ ಯಾರೂ ನನ್ನ ಕಟೌಟ್‌ ಹಾಕಬಾರದು, ಶುಭ ಕೋರುವ ಹೋರ್ಡಿಂಗ್‌ ಹಾಕಬಾರದು ಎಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಮನವಿ ಮಾಡಿದರು.

See also  ಅಲ್ಪಸಂಖ್ಯಾತರನ್ನು ಕಡೆಗಣಿಸಲು ಸಾಧ್ಯವಿಲ್ಲ: ಉಮ್ಮನ್ ಚಾಂಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು