News Kannada
Thursday, December 08 2022

ಉಡುಪಿ

ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ : ಶೋಭಾ ಕರಂದ್ಲಾಜೆ

Photo Credit :

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಇಂದು 71ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ. ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ ಎಂದು ಶ್ರೀಕೃಷ್ಣ- ಚಾಮುಂಡೇಶ್ವರಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಅವರು, ಮಾಧ್ಯಮಗಳ ಮೂಲಕ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ದೇಶದ ಬಡಜನರ ಸೇವೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಿಯವಾದದ್ದು. ಸೇವಾ ಚಟುವಟಿಕೆ ನಡೆಸಿದರೆ ಅವರಿಗೆ ಮುದಕೊಡುತ್ತದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೇರೆ-ಬೇರೆ ರೀತಿಯ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ನಗರಸಭಾ ವ್ಯಾಪ್ತಿಯ ಸುಬ್ರಹ್ಮಣ್ಯ ನಗರ ವಾರ್ಡ್‌ನ ಕೊರಗ ಜನಾಂಗದ ಮನೆಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗೀತಾಂಜಲಿ ಸುವರ್ಣ ಮೊದಲಾದವರಿದ್ದರು.

See also  ಉಡುಪಿ: ಮಹಿಳೆಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿದ ವ್ಯಕ್ತಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು