News Kannada
Saturday, May 14 2022
ಉಡುಪಿ

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ , ನಾಲ್ವರು ಆರೋಪಿಗಳು ಬಂಧನ

Photo Credit : IANS

ಉಡುಪಿ : ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ ನಗರದ ಹೃದಯ ಭಾಗದಲ್ಲಿ ಇರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ದಾಳಿ‌ ನಡೆಸಿ, ಇಬ್ಬರು ಹುಡುಗಿಯರು ಮತ್ತು ನಾಲ್ಕು ಮಂದಿ‌ ಆರೋಪಿಗಳನ್ನು ಬಂಧಿಸಿದ್ದಾರೆ.

ಉಡುಪಿ ಪೊಲೀಸರಿಂದ ಬಂಧಿತರಾದ ಆರೋಪಿಗಳು ಗುರುರಾಜ್, ವಿಜಯ ಶೆಟ್ಟಿ, ಹೇಮಂತ್, ಸಂದೀಪ್ ಮೊಗವೀರ ಎಂದು ತಿಳಿದು ಬಂದಿದೆ. ಲಾಡ್ಜ್ ಮಾಲಕ ರಮೇಶ್ ಶೆಟ್ಟಿ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ಅವರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರಿಗೆ ಕೆಲವು ಸಮಯದಿಂದ ಇಲ್ಲಿ‌ಅನೈತಿಕ ದಂಧೆ ನಡೆಯುತ್ತಿದೆ ಎಂದು ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ಜಯಂತ್ ಮತ್ತು ಅವರ ತಂಡ ಐದು ಮಂದಿ ಮೇಲೆ ಕೇಸು ದಾಖಲಿಸಿಕೊಂಡು ನಾಲ್ಕು ಮಂದಿ ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.