News Kannada
Thursday, March 30 2023

ಉಡುಪಿ

ಮುಂದುವರೆದ ಹಿಜಾಬ್ ಸಂಘರ್ಷ: ಉಡುಪಿ ಎಂಜಿಎಂ ಕಾಲೇಜಿನಲ್ಲಿ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಮುಂದೂಡಿಕೆ

Photo Credit :

ಉಡುಪಿ : ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.

ಫೆ.8ರಂದು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್‌ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.

ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

See also  ರಾತ್ರಿ ಸುರಿದ ಮಳೆಗೆ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ: 30 ಜನರ ಸ್ಥಳಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು