ಉಡುಪಿ: ಅಗ್ನಿಪಥ್ ಯೋಜನೆಯಡಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ ವೇಳೆಯೂ ಮೀಸಲಾತಿ ನೀಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗ್ನಿಪಥ್ ಯೋಜನೆಯಡಿ ಸೇವೆ ಸಲ್ಲಿಸಿ ನಿವೃತ್ತರಾದ ಅಗ್ನಿವೀರರಿಗೆ ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಇಲಾಖೆಯಲ್ಲಿ ಮೀಸಲಾತಿಯಡಿ ದೈಹಿಕ ಶಿಕ್ಷಕ ಅಥವಾ ವಾರ್ಡನ್ ನಂತಹ ಶೇ. 75 ರಷ್ಟು ಹುದ್ದೆಗಳನ್ನು ನೀಡಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ಕಡತ ಮಂಡಿಸಲಾಗಿದೆ ಎಂದು ಹೇಳಿದ್ದಾರೆ.