ಕಾಂತಾವರ: ಆಗಸ್ಟ್ 11 ರಂದು ಪ್ರಕೃತಿ ವಿದ್ಯಾ ಸಮೂಹ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಮತದಾನದ ಅರಿವು ಮೂಡಿಸುವ ಉದ್ದೇಶದಿಂದ ಪ್ರಜಾಪ್ರಭುತ್ವ ಮಾದರಿಯ ಚುನಾವಣೆಯನ್ನು ನಡೆಸಿ , ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಗ್ರಹಣ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಗಳಾಗಿ ಆಗಮಿಸಿದ ಡಾ ರಾಕಿ ಆಂಟೋನಿ ಮಥಾಯ್ ಅವರು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸ್ವತಂತ್ರ ಭಾರತದಲ್ಲಿ ನಾಯಕತ್ವದ ಮಹತ್ವದ ಕುರಿತು ವಿವರಿಸುತ್ತಾ , ಪ್ರತ್ಯಕ್ಷ ಅನುಭವದ ಮೂಲಕ ಪ್ರಜಾಪ್ರಭುತ್ವದ ಅರಿವನ್ನು ಮೂಡಿಸುವುದು ಅತ್ಯಗತ್ಯ ಎಂದು ಹೇಳುವುದರ ಜೊತೆಗೆ ಚುನಾವಣೆಯಲ್ಲಿ ಭಾಗವಹಿಸಿ ಸರ್ವಾನುಮತದಿಂದ ಆಯ್ಕೆ ಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಬ್ಯಾಡ್ಜ್ ಗಳು ಮತ್ತು ಕವಚಗಳನ್ನು ಹಾಕಿ ಅಭಿನಂದಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ ಕುಮಾರ ರವರು ಉಪಸ್ಥಿತರಿದ್ದರು. ಪಿಯುಸಿ ಪ್ರಭಾರ ಪ್ರಾಂಶುಪಾಲರಾದ ಕುಮಾರಿ ವಿನ್ಯಾ ರವರು ಪದಗ್ರಹಣ ಪಡೆದ ಎಲ್ಲಾ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳು ತಮಗೆ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಪ್ರಾಂಶುಪಾಲರಾದ ಶ್ರೀ ಪ್ರಸಾದ ರವರು ತಂಡದ ನಾಯಕ , ನಾಯಕಿಗೆ ಬ್ಯಾಡ್ಜ್ ಮತ್ತು ಕವಚಗಳನ್ನು ನೀಡಿ ಅಭಿನಂದಿಸಿದರು . ಹತ್ತನೆಯ ತರಗತಿ ವಿದ್ಯಾರ್ಥಗಳಾದ ಆದಿತ್ಯ ಉದಯ ಪೂಜಾರಿ ಕಾರ್ಯಕ್ರಮದ ನಿರೂಪಣೆಯನ್ನು, ಹೇಮಂತ್ ಗೌಡ ರವರು ಎಲ್ಲರಿಗೂ ವಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ವರ್ಗದವರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.