News Kannada
Sunday, January 29 2023

ಉಡುಪಿ

ಉಡುಪಿ: ನ. 27ರಿಂದ ಡಿ. 11 ರ ವರೆಗೆ ಕಿಶೋರ ಯಕ್ಷಗಾನ ಸಂಭ್ರಮ

November 27 Kishore Yakshagana celebrations till 11th
Photo Credit : News Kannada

ಉಡುಪಿ: ಶ್ರೀಕೃಷ್ಣ ಮಠ ಪರ್ಯಾಯ ಶ್ರೀಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇದರ ವತಿಯಿಂದ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 44 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ-2022″ ಇದೇ ನ. 27 ರಿಂದ ಡಿ. 11 ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರು ಆಗಿರುವ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಈ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನದ ಮುಂದುವರಿದ ಭಾಗವೂ ಡಿ. 13 ರಿಂದ 20 ರ ವರೆಗೆ ಬ್ರಹ್ಮಾವರ ಪೇಟೆಯ ಬಂಟರ ಭವನ ಬಳಿಯಲ್ಲಿ ಜರುಗಲಿದೆ ಎಂದರು.

ಸುಮಾರು 20 ದಿನಗಳಿಗೂ ಅಧಿಕ ಕಾಲ ನಡೆಯುವ ಈ ಯಕ್ಷ ಪ್ರದರ್ಶನದಲ್ಲಿ 1400 ಕ್ಕೂ ಅಧಿಕ ವಿದ್ಯಾರ್ಥಿಗಳು ವೇಷ ಹಾಕಲಿದ್ದಾರೆ. ನ. 27 ರಿಂದ ಡಿ. 11 ರ ವರೆಗೆ ಸಂಜೆ 4 ಗಂಟೆಯಿಂದ 5.30 ರ ವರೆಗೆ ಹಾಗೂ ಸಂಜೆ 7 ಗಂಟೆಯಿಂದ ರಾತ್ರಿ 8.30 ರ ವರೆಗೆ ದಿನಕ್ಕೆ 2 ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಆಯ್ದ 2 ಪ್ರಸಂಗಗಳ ಪ್ರದರ್ಶನ ನಡೆಯಲಿದೆ.

ನ. 27ರಂದು ಮಧ್ಯಾಹ್ನ 3.45 ಕ್ಕೆ ಕಿಶೋರ ಯಕ್ಷಗಾನ ಸಂಭ್ರಮವನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್, ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.

See also  ಉಡುಪಿ: ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು