ತೆಕ್ಕಟ್ಟೆ: ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಘಟನೆ ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾವಳಿ ಸೇತುವೆ ತಿರುವಿನಲ್ಲಿ ಶನಿವಾರ ರಾತ್ರಿ ಗಂಟೆ 11ರ ಸುಮಾರಿಗೆ ಸಂಭವಿಸಿದೆ.
ಬಿದ್ಕಲ್ಕಟ್ಟೆಯಿಂದ ಬ್ರಹ್ಮಾವರದ ಕಡೆಗೆ ರಬ್ಬರ್ ಮರ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಎದುರಿನಲ್ಲಿ ಖೋಕ್ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.